Wednesday, August 27, 2025
Google search engine
HomeUncategorizedಕನಕದಾಸರು ಸಮಸಮಾಜದ ಕನಸು ಕಂಡಿದ ದಾಸಶ್ರೇಷ್ಠ: ಸಿಎಂ ಸಿದ್ದರಾಮಯ್ಯ

ಕನಕದಾಸರು ಸಮಸಮಾಜದ ಕನಸು ಕಂಡಿದ ದಾಸಶ್ರೇಷ್ಠ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಡೀ ಜಾತ್ಯಾತೀತವಾದ, ಮೇಲು ಕೀಳು ಬೇಧಭಾವವಿಲ್ಲದ ಸಮಸಮಾಜ ನಿರ್ಮಿಸಲು ಶ್ರಮಿಸಿದ ವಿಶ್ವಮಾನವರು ಕನಕದಾಸರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸ ಜಯಂತಿ ಪ್ರಯುಕ್ತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ: ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸ 

ಕನಕದಾಸರು ಸಮಾಜಸುಧಾರಕರಾಗಿದ್ದರು. ಅವರ ಸಾಹಿತ್ಯದ ಮೂಲಕ ಮನುಷ್ಯತ್ವವನ್ನು ಸಾರಿದರು. ಇಡೀ ಜಾತ್ಯಾತೀತವಾದ, ಮೇಲು ಕೀಳು ಬೇಧಭಾವವಿಲ್ಲದ ಸಮಸಮಾಜ ನಿರ್ಮಿಸಲು ಶ್ರಮಿಸಿದ ವಿಶ್ವಮಾನವ. ರಾಮಧಾನ್ಯ ಚರಿತೆ, ಮೋಹನತರಂಗಿಣಿ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದವರು. ಸಮಾಜದ ತಾರತಮ್ಯ ಹೋಗಲಾಡಿಸಲು ಹೋರಾಡಿದ ದಾಸಶ್ರೇಷ್ಠರ ದಿನವನ್ನು ಸರ್ಕಾರ ಇಂದು ಆಚರಿಸುತ್ತಿದೆ. ಸಾಹಿತ್ಯದ ಮೂಲಕ ತಮ್ಮ ಆದರ್ಶಗಳನ್ನು ಜನರಿಗೆ ತಿಳಿಹೇಳಿ ಜಾಗೃತಿ ಮೂಡಿಸಿದ್ದರು. ಜನರಿಗೆ ಅರ್ಥವಾಗುವ ಸರಳಭಾಷೆಯಲ್ಲಿ ತಮ್ಮ ದಾಸಸಾಹಿತ್ಯವನ್ನು ರಚಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನಾಡಿನ ಎಲ್ಲ ಜನತೆಗೆ ಕನಕದಾಸ ಜಯಂತಿಯ ಶುಭಾಶಯಗಳನ್ನು ಕೋರಿದರು.

ಹೆಚ್ಚುವರಿ 188 ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆಗೆ ಚಿಂತನೆ:

ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಬಗ್ಗೆ ಉತ್ತರಿಸಿ, ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇದಲ್ಲದೇ ಅಗತ್ಯವಿರುವೆಡೆ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್ ಗೆ ಸ್ಥಳದ ಅಭಾವವಿರುವ ಕಡೆ ಮೊಬೈಲ್ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments