ಬೊಮ್ಮಾಯಿ ಸೋಲಿಸೋಕೆ ಹಣ ಕಳುಹಿಸಿದ್ದ ಬಿ.ವೈವಿಜಯೇಂದ್ರ: ಯತ್ನಾಳ್ ಸಿಡಿ ಮಿಡಿ

ಬೆಳಗಾವಿ: ಮಾಜಿ ಸಿಎಂ,ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ನಾಯಕರನ್ನು ಸೋಲಿಸಲು ಬಿಜೆಪಿಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಪಕ್ಷದ ಶಾಸಕ ಬಸನಗೌಡ ಪಾಟೀಲ್​ ಯತ್ನಾಲ್​ ಆರೋಪ ಮಾಡಿದ್ಧಾರೆ.

ನಗರದ ಕೂಡಲಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಯಡಿಯೂರಪ್ಪ ಹೈಕಮಾಂಡ್​​ನವರನ್ನು ಬ್ಲ್ಯಾಕ್ ಮೆಲ್ ಮಾಡಿ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಹೈಕಮಾಂಡ್ ಕೂಡ ಯಾಕೆ ಹೆದರಿತೋ ಗೊತ್ತಿಲ್ಲ.ನಮ್ಮದೇನು ಶಕ್ತಿ ಇಲ್ಲವೇ, ನಮ್ಮ ಹಿಂದೆಯೂ ಜನ ಇದ್ದಾರೆ. ನೀವೆಲ್ಲ ಗಟ್ಟಿಯಾಗಿ ನಿಲ್ಲಿ, ಎಲ್ಲರನ್ನೂ ಸರಿ ಮಾಡೊಣ ಎಂದು ಯತ್ನಾಳ್ ಹೇಳಿದ್ದಾರೆ.

ವಿ.ಸೋಮಣ್ಣನ್ನು ಬಲಿಪಶು ಮಾಡಿದ್ರು 

ಸಚಿವ ಸೋಮಣ್ಣ ಅವರನ್ನು ಸೋಲಿಸಿದ್ದು ಯಾರು? ಲಿಂಗಾಯತರನ್ನು ಅಲ್ಲಿಗೆ ಕಳುಹಿಸಿ ಸೋಮಣ್ಣ ಅವರನ್ನು ಬಲಿ ಕೊಟ್ಟರು. ಸೋಮಣ್ಣ ಅವರನ್ನು ಗೋವಿಂದರಾಜ ನಗರದಲ್ಲಿ 20-25 ಸಾವಿರ ಮತಗಳಿಂದ ಗೆಲ್ಲಿಬೇಕಿತ್ತು. ಆದರೆ ಅವರನ್ನು ಬಲಿಪಶು ಮಾಡಿದರು ಎಂದು ಅವರು ದೂರಿದ್ದಾರೆ.

ಬೊಮ್ಮಾಯಿಯನ್ನು ಸೋಲಿಸಲು ಹಣ ಕಳುಹಿಸಿದ್ದ ವಿಜಯೇಂದ್ರ

ಬಸವರಾಜ ಬೊಮ್ಮಾಯಿ ಅವರನ್ನು ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದರು ಎಂದು ಯತ್ನಾಳ್ ಗಂಭೀರ ಆರೋ ಮಾಡಿದ್ದಾರೆ. ಆಶ್ಚರ್ಯ ಎಂದರೆ, ಬೊಮ್ಮಾಯಿ ಸೋಲಿಸಲು ಹಣ ಕಳುಹಿಸಿದ್ದ ವಿಜಯೇಂದ್ರ ಈಗ ರಾಜ್ಯ ಘಟಕದ ಅಧ್ಯಕ್ಷರಾಗಿದ್ದಾರೆ. ಬೊಮ್ಮಾಯಿ ಅವರೇ ವಿಜಯೇಂದ್ರ ಹಣ ಕಳುಹಿಸಿದ್ದ ಬಗ್ಗೆ ನನಗೆ ಹೇಳಿದ್ದರು. ಒಮ್ಮೆ ಸತ್ಯ ಹೊರಬರಬೇಕು ರಾಜ್ಯದಲ್ಲಿ. ಅಪ್ಪ, ಮಕ್ಕಳು ಏನು ಮಾಡಿದ್ದಾರೆ ಎಂಬುದು ಗೊತ್ತಾಗಬೇಕು ಎಂದು ಅವರು ಕಿಡಿಕಾರಿದ್ದಾರೆ.

 

 

 

RELATED ARTICLES

Related Articles

TRENDING ARTICLES