Saturday, August 23, 2025
Google search engine
HomeUncategorizedಕ್ರಿಕೆಟಿಗ ಮೊಹಮ್ಮದ್ ಶಮಿಗೆ ಒಲಿದ ಅರ್ಜುನ ಪ್ರಶಸ್ತಿ!

ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಒಲಿದ ಅರ್ಜುನ ಪ್ರಶಸ್ತಿ!

ಮುಂಬೈ: ಏಕದಿನ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ವೇಗದ ಬೌಲರ್ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಇತ್ತೀಚೆಗೆ ನಡೆದ ಐಸಿಸಿ ಏಕದಿನ ವಿಶ್ವಕಪ್ 2023ರಲ್ಲಿ ಶಮಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಇದಲ್ಲದೆ, ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಇದನ್ನೂ ಓದಿ: ದೇವಾಲಯದ ಅವ್ಯವಸ್ಥೆ: ಅಯ್ಯಪ್ಪನ ದರ್ಶನ ಸಿಗದೆ ಭಕ್ತರು ವಾಪಸ್!

ಕ್ರೀಡಾ ಸಚಿವಾಲಯದ ಮೂಲಗಳ ಪ್ರಕಾರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಶಮಿ ಹೆಸರನ್ನು ಪಟ್ಟಿಯಲ್ಲಿ ಸೇರಿಸಲು ವಿಶೇಷ ವಿನಂತಿಯನ್ನು ಮಾಡಿದೆ. ಈ ಹಿಂದೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಆಟಗಾರರ ಪಟ್ಟಿಯಲ್ಲಿ ಅವರ ಹೆಸರನ್ನು ಸೇರಿಸಿರಲಿಲ್ಲ. ಶಮಿ ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಕೇವಲ ಏಳು ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದರು. ಶಮಿ ಹೊರತುಪಡಿಸಿ 16 ಆಟಗಾರರು ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments