ನವದೆಹಲಿ : ಇಡೀ ರಾಷ್ಟ್ರದ ಗಮನಸೆಳೆದಿದ್ದ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಸಮೀಕ್ಷೆಗಳ ಲೆಕ್ಕಾಚಾರದಂತೆ ಆಮ್ ಆದ್ಮಿ ಪಕ್ಷ ಮತ್ತೊಂದು ಪ್ರಚಂಡ ಗೆಲುವನ್ನು ಪಡೆದಿದೆ. ಹ್ಯಾಟ್ರಿಕ್ ಗೆಲುವಿನೊಂದಿಗೆ ಅರವಿಂದ ಕೇಜ್ರಿವಾಲ್ ರಾಜಧಾನಿಯಲ್ಲಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲು ಸನ್ನದ್ಧರಾಗಿದ್ದಾರೆ.
ಒಟ್ಟು 70 ಸಂಖ್ಯಾಬಲವಿರುವ ದೆಹಲಿ ವಿಧಾನಸಭೆಯಲ್ಲಿ ಆಮ್ ಆದ್ಮಿ ಬರೋಬ್ಬರಿ 62 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ 8 ಕ್ಷೇತ್ರಗಳನ್ನು ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರೆ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನು ಪಡೆದಿಲ್ಲ. ಕೇಜ್ರಿವಾಲ್ ನೇತೃತ್ವದ ಸರ್ಕಾರ ದೆಹಲಿಯಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳಿಗೆ ಮತದಾರರು ಕೈಹಿಡಿದು ಮತ್ತೊಮ್ಮೆ ಆಶೀರ್ವಾದ ಮಾಡಿದ್ದಾರೆ.
ದೆಹಲಿಯಲ್ಲಿ ಮತ್ತೆ ಆಪ್ ದರ್ಬಾರ್ – ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಕೇಜ್ರಿವಾಲ್..!
RELATED ARTICLES