Thursday, August 21, 2025
Google search engine
HomeUncategorizedಡಿ ಬಾಸ್ ‘ಕಾಟೇರ’ ಚಿತ್ರ ನೋಡಿ ಮೆಚ್ಚಿಕೊಂಡ ಪ್ರಲ್ಹಾದ್ ಜೋಶಿ

ಡಿ ಬಾಸ್ ‘ಕಾಟೇರ’ ಚಿತ್ರ ನೋಡಿ ಮೆಚ್ಚಿಕೊಂಡ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೂಳೆಬ್ಬಿಸಿದೆ. ಡಿ ಬಾಸ್ ನಟ ದರ್ಶನ್​ ಅವರ ಅಭಿನಯಕ್ಕೆ ಫ್ಯಾನ್ಸ್​ ಫಿದಾ ಆಗಿದ್ದಾರೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ಕೂಡ ಇಂದು ‘ಕಾಟೇರ’ ಸಿನಿಮಾ ವೀಕ್ಷಿಸಿ ತಮ್ಮ ಅನಿಸಿಕೆ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪ್ರಲ್ಹಾದ್​ ಜೋಶಿ ಅವರು ‘ಕಾಟೇರ’ ಸಿನಿಮಾವನ್ನು ನೋಡಿದ್ದಾರೆ. ಅವರ ಜೊತೆ ಶಾಸಕ ಮಹೇಶ್​ ಟೆಂಗಿನಕಾಯಿ ಕೂಡ ಸಾಥ್​ ನೀಡಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಕ್‌ಲೈನ್ ವೆಂಕಟೇಶ್ ಅವರ ನಿರ್ಮಾಣದಲ್ಲಿ ತರುಣ್ ಸುಧೀರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಕಾಟೇರ ಚಿತ್ರವನ್ನು ಹುಬ್ಬಳ್ಳಿಯಲ್ಲಿ ವೀಕ್ಷಿಸಿದೆನು. ರೈತರಿಗೆ ಪ್ರತಿಯೊಬ್ಬರೂ ನೀಡಬೇಕಾದ ಪ್ರಾಮುಖ್ಯತೆ, ಸಮಾಜದಲ್ಲಿ ಸರ್ವರನ್ನೂ ಸಮಾನವಾಗಿ ಕಾಣಬೇಕೆನ್ನುವ ಸಂದೇಶವನ್ನು ಚಲನಚಿತ್ರದ ಮೂಲಕ ಅಚ್ಚುಕಟ್ಟಾಗಿ, ಅದ್ಭುತವಾಗಿ ತೋರಿಸಲಾಗಿದೆ ಎಂದು ಹೇಳಿದ್ದಾರೆ.

ನಟ ದರ್ಶನ್ ಅವರ ಅದ್ಭುತ ನಟನೆ ಅಭಿಮಾನಿಗಳನ್ನು ಚಲನಚಿತ್ರ ಪ್ರಿಯರನ್ನು ಮತ್ತೊಮ್ಮೆ ರಂಜಿಸುವುದರ ಜೊತೆಗೆ ಹೊಸ ಸಂದೇಶವನ್ನು ಸಾರಿದ್ದಾರೆ. ಚಲನಚಿತ್ರ ಯಶಸ್ಸು ಕಾಣಲಿ ಎಂದು ಕಾಟೇರ ಚಲನಚಿತ್ರ ತಂಡಕ್ಕೆ ಶುಭ ಹಾರೈಸುತ್ತೇನೆ ಎಂದು ಪ್ರಲ್ಹಾದ್​ ಜೋಶಿ ತಿಳಿಸಿದ್ದಾರೆ. ಕೇಂದ್ರ ಸಚಿವರಿಂದ ಮೆಚ್ಚುಗೆ ಸಿಕ್ಕಿದ್ದಕ್ಕೆ ಡಿ ಬಾಸ್ ಸೆಲೆಬ್ರಿಟಿಸ್​ ಫುಲ್ ಖುಷ್ ಆಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments