ನವದೆಹಲಿ: ದೇಶದ ಜನರಿಗೆ ರಾಷ್ಟ್ರಪತಿ ಬ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.
‘ಸಮೃದ್ಧ ರಾಷ್ಟ್ರ ನಿರ್ಮಾಣದ ಸಂಕಲ್ಪ ಕೈಗೊಳ್ಳಿ. ಹೊಸ ಗುರಿ ಮತ್ತು ಉದ್ದೇಶಗಳೊಂದಿಗೆ ಮುನ್ನಡೆಯಲು ಹೊಸವರ್ಷ ಬರುತ್ತಿದೆ’ ಎಂದು ದೌಪದಿ ಮುರ್ಮು ತಿಳಿಸಿದ್ದಾರೆ.
Warm New Year greetings to all! May the Year 2024 bring happiness, peace and prosperity for everyone. Let us welcome the New Year with a renewed commitment to contribute to inclusive and sustainable development.
— President of India (@rashtrapatibhvn) January 1, 2024
‘ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಈ ವರ್ಷ (2024) ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಉತ್ತಮ ಆರೋಗ್ಯ ದೊರೆಯಲಿ’ ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
Wishing everyone a splendid 2024! May this year bring forth prosperity, peace and wonderful health for all.
— Narendra Modi (@narendramodi) January 1, 2024
ಹೊಸ ವರ್ಷವನ್ನು ಅದ್ಧೂರಿಯವಾಗಿ ಬರಮಾಡಿಕೊಂಡಿದ್ದಾರೆ. ರಸ್ತೆಗಳು, ಹೋಟೆಲ್, ಪಬ್, ಬಾರ್ ಹಾಗೂ ರೆಸ್ಟೋರೆಂಟ್ಗಳಲ್ಲಿ ನೆಚ್ಚಿನ ಹಾಡುಗಳಿಗೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದ ಯುವಕ ಯುವತಿಯರು. ಕೇಕೆ, ಶಿಳ್ಳೆ ಹಾಕುವ ಮೂಲಕ ಮೊಳಗಿದ ಹ್ಯಾಪಿ ನ್ಯೂ ಇಯರ್’ ಫೋಷಣೆಯಾಗಿದೆ.
ಇದನ್ನೂ ಓದಿ: ಜನವರಿ 1ರಂದೇ ಹೊಸ ವರ್ಷಾಚರಣೆ ಯಾಕೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು ನಗರದಲ್ಲಿ ಭಾನುವಾರ ಮಧ್ಯರಾತ್ರಿ 1 ಗಂಟೆ ವರೆಗೆ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆ ಅವಕಾಶ ಕಲ್ಪಿಸಿತ್ತು. ಹಲವೆಡೆ ಅವಧಿಗೂ ಮೀರಿ ಆಚರಣೆ ನಡೆಯಿತು. ರಸ್ತೆಗಳು ರಂಗು ಪಡೆದುಕೊಂಡಿದ್ದವು. ಸ್ಥಳದಲ್ಲಿದ್ದ ಪೊಲೀಸರು ದಟ್ಟಣೆ ನಿಯಂತ್ರಣಕ್ಕೆ ಹರಸಾಹಸಪಟ್ಟಿದ್ದಾರೆ.


