Tuesday, August 26, 2025
Google search engine
HomeUncategorizedಚುನಾವಣಾ ನಿವೃತ್ತಿ ನಿರ್ಧಾರ ಹಿಂಪಡೆವ ಸುಳಿವು ಕೊಟ್ಟ; ಡಿ.ವಿ.ಸದಾನಂದಗೌಡ

ಚುನಾವಣಾ ನಿವೃತ್ತಿ ನಿರ್ಧಾರ ಹಿಂಪಡೆವ ಸುಳಿವು ಕೊಟ್ಟ; ಡಿ.ವಿ.ಸದಾನಂದಗೌಡ

ಬೆಂಗಳೂರು: ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷದಲ್ಲಿ ತೊಡಗಿಕೊಂಡು ಕೆಲಸ ಮಾಡುತ್ತೇನೆ ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಮಾಜಿ ಮುಖ್ಯಮಂತ್ರಿ

ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದಾರೆ.

ಹೌದು,ಬಿಜೆಪಿ ಹೈಕಮಾಂಡ್‌ ಬಯಸಿದರೆ ನಿವೃತ್ತಿ ನಿರ್ಧಾರವನ್ನು ಹಿಂಪಡೆಯುತ್ತೇನೆ ಎಂದು ಹೇಳಿದ್ಧಾರೆ. ಪ್ರಸ್ತುತ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿರುವ ಸದಾನಂದಗೌಡ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದರು. ಇದೀಗ, ಅವರು ತಮ್ಮ ನಿರ್ಧಾರವನ್ನು ಹಿಂಪಡೆದಿದ್ದಾರೆ ಎಂದು ಹೇಳಿರುವುದು ವರದಿಯಾಗಿದೆ.

“ಗ್ರಾಮೀಣ ಭಾಗದಿಂದ ಬಂದ ನನಗೆ ರಾಜ್ಯದಲ್ಲಿ ಮುಖ್ಯಮಂತ್ರಿ, ಕೇಂದ್ರದಲ್ಲಿ ಸಚಿವ ಸ್ಥಾನ ಸೇರಿದಂತೆ ಹಲವಾರು ಮಹತ್ವದ ಜವಾಬ್ದಾರಿಗಳನ್ನು ಬಿಜೆಪಿ ಕೊಟ್ಟಿದೆ. ರಾಜಕಾರಣದಲ್ಲಿ ಎಲ್ಲರಿಗೂ ಅವಕಾಶ ಸಿಗಬೇಕು ಎಂಬ ಕಾರಣಕ್ಕೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದೆ, ಆದರೆ, ಪಕ್ಷದ ಹಲವು ನಾಯಕರು ಮತ್ತು ಮುಖಂಡರು ಚುನಾವಣೆಯಲ್ಲಿ ಸ್ಪರ್ದಿಸುವಂತೆ ಒತ್ತಾಯಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನನ್ನನ್ನು ಮುಗಿಸೋಕೆ ಸಂಚು ನಡೆಯುತ್ತಿದೆ : ರೇವಣ್ಣ ಅಚ್ಚರಿ ಹೇಳಿಕೆ

ಸದ್ಯಕ್ಕೆ ತಟಸ್ಥ ನಿಲುವು ಹೊಂದಿದ್ದೇನೆ. ಪಕ್ಷದ ಹೈಕಮಾಂಡ್ ಅಪೇಕ್ಷಿಸಿದರೆ, ಸ್ಪರ್ಧೆ ಅನಿವಾರ್ಯವೆಂದು ಕಂಡುಬಂದರೆ ನನ್ನ ತೀರ್ಮಾನವನ್ನು ಪರಿಶೀಲಿಸುತ್ತೇನೆ. ಪಕ್ಷದ ತೀರ್ಮಾನದ ಆಧಾರದ ಮೇಲೆ ನನ್ನ ನಿರ್ಧಾರ ಅವಲಂಬಿಸಿದೆ” ಎಂದು ತಿಳಿಸಿದ್ದಾರೆ.

“ಬೆಂಗಳೂರು ಉತ್ತರ ಕ್ಷೇತ್ರದಲ್ಲಿ 14 ಮಂದಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಿದ್ದಾರೆ. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು, ಅವರ ಗೆಲುವಿಗಾಗಿ ಶ್ರಮಿಸುತ್ತೇನೆ” ಎಂದು ಹೇಳಿದ್ದಾರೆ.

 

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments