Saturday, August 23, 2025
Google search engine
HomeUncategorizedಲೋಕಸಭೆಯಲ್ಲಿ ಬಿ ವೈ ರಾಘವೇಂದ್ರರನ್ನು ಗೆಲ್ಲಿಸುವಂತೆ ಶಾಸಕ ಶಾಮನೂರು ಶಿವಶಂಕರಪ್ಪ ಕರೆ

ಲೋಕಸಭೆಯಲ್ಲಿ ಬಿ ವೈ ರಾಘವೇಂದ್ರರನ್ನು ಗೆಲ್ಲಿಸುವಂತೆ ಶಾಸಕ ಶಾಮನೂರು ಶಿವಶಂಕರಪ್ಪ ಕರೆ

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ವೀರಶೈವ ಸಮಾಜದ ಬಾಂಧವರಲ್ಲಿ ಕಾಂಗ್ರೆಸ್​ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಕರೆ ನೀಡಿದ್ದಾರೆ.

ಶಿವಮೊಗ್ಗದ ಬೆಕ್ಕಿನ‌ಕಲ್ಮಠದಲ್ಲಿ ಗುರುಬಸವ ಸ್ವಾಮೀಜಿಯ 112 ನೇ ಪುಣ್ಯ ಸ್ಮರಣೋತ್ಸವದ ಪ್ರಯುಕ್ತ ಶುಕ್ತವಾರ ಭಾವೈಕ್ಯ ಸಮ್ಮೇಳನ ಹಾಗೂ ಗುರುಬಸವಶ್ರೀ ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ವೇಳೆ ಗುರು ಬಸವಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶಾಮನೂರು ಶಿವಶಂಕರಪ್ಪ ಮಾತನಾಡಿದರು. ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿ ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ, ಮುಂದೆಯೂ ಇವರನ್ನು ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯವಾಗಿದೆ.

ಇದನ್ನೂ ಓದಿ: ಶೆಟ್ಟರ್ ಈಗ ಹೋಗಿದಾರೆ, ಮುಂದೆ ಯಾರು ಹೋಗ್ತಾರೋ ಗೊತ್ತಿಲ್ಲ : ಸತೀಶ್ ಜಾರಕಿಹೊಳಿ

ಬಿ.ವೈ ರಾಘವೇಂದ್ರ ಲೋಕಸಭೆ ಸದಸ್ಯರಾಗಿ ಜಿಲ್ಲೆಯಲ್ಲಿ ಆಗಬೇಕಿರುವ ಎಲ್ಲಾ ಕೆಲಸಗಳನ್ನು ಪೂರ್ಣ ಮಾಡಿ ಮುನ್ನಡೆಯುತ್ತಿದ್ದಾರೆ. ಜನರಿಗೆ ಅಭಿವೃದ್ಧಿ ಕೆಲಸ ಆಗಬೇಕಿರುವುದು ಮೊದಲ ಆದ್ಯತೆ. ಜನರ ಅಭಿಲಾಷೆಯಂತೆ ಕೆಲಸ ಮಾಡಿರುವ ಲೋಕಸಭಾ ಸಂಸದರನ್ನು ಬರುವ ಲೋಕಸಭೆ ಚುನಾವಣೆಯಲ್ಲಿಯೂ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ವೀರಶೈವ ಲಿಂಗಾಯತರಲ್ಲಿ ಅನೇಕ ಒಳ ಪಂಗಡಗಳಿವೆ. ಅವುಗಳು ದೂರವಾಗಿ ಎಲ್ಲರೂ ಒಂದೇ ಎಂಬ ಭಾವನೆ ಬರಬೇಕು, ಆಗ ಐಕ್ಯತೆ ಮೂಡುತ್ತದೆ ಎಂದು ಇದೇ ಸಂದರ್ಭದಲ್ಲಿ ಶಾಮನೂರು ಶಿವಶಂಕರಪ್ಪ ಹೇಳಿದರು. ಸಮಾರಂಭದಲ್ಲಿ ಬೆಕ್ಕಿನ‌ಕಲ್ಮಠದ ಮುರುಘರಾಜೇಂದ್ರ ಸ್ವಾಮೀಜಿ ಸೇರಿದಂತೆ ಇತರರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments