ಬೆಂಗಳೂರು: ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ (ಜಾರಿ ನಿರ್ದೇಶನಾಲಯ) ದಾಳಿ ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು.
ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಬೇಕಿರುವುದು ಮಾತ್ರವಲ್ಲ ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಬಂದಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಮದ್ಯಪ್ರಿಯರಿಗೆ ಬಿಗ್ ಶಾಕ್ : ಬಿಯರ್ ಬೆಲೆ ಮತ್ತೆ ಏರಿಕೆ
ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.
ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, @BJP4India ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ( ಜಾರಿ ನಿರ್ದೇಶನಾಲಯ ) ದಾಳಿ ಸಾಕ್ಷಿ.
ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ… pic.twitter.com/jV4lNgLLCs
— Siddaramaiah (@siddaramaiah) February 2, 2024


