ಬೆಂಗಳೂರು : ಇಂಗ್ಲೆಂಡ್ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಬೊಂಬಾಟ್ ಸಿಕ್ಸರ್ ಬಾರಿಸುವ ಮೂಲಕ ಶತಕ ಪೂರೈಸಿದರು.
ವಿಶಾಖಪಟ್ಟಣದ ವೈಜಾಗ್‌ನ ಡಾ. ವೈಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ 151 ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್ ಹಾಗೂ 11 ಬೌಂಡರಿಗಳ ನೆರವಿನೊಂದಿಗೆ ಶತಕ ಪೂರೈಸಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ 2ನೇ ಶತಕ ದಾಖಲಿಸಿದರು.
ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆರಂಭಿಸಿದೆ. ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಭಾರತಕ್ಕೆ ಯಶಸ್ವಿ ಜೈಸ್ವಾಲ್ ಆಸರೆಯಾಗಿದ್ದಾರೆ. ಎಚ್ಚರಿಕೆಯಿಂದ ಬ್ಯಾಟ್ ಬೀಸುತ್ತಿರುವ ಜೈಸ್ವಾಲ್ ಆಂಗ್ಲರನ್ನು ಕಾಡುತ್ತಿದ್ದಾರೆ.
ನಾಯಕ ರೋಹಿತ್ ಶರ್ಮಾ 14, ಶುಭ್ಮನ್ ಗಿಲ್ 34 ಹಾಗೂ ಶ್ರೇಯಸ್ ಅಯ್ಯರ್ 27 ರನ್ ಗಳಿಸಿ ಔಟಾದರು. ಇಂಗ್ಲೆಂಡ್ ಪರ ಜೇಮ್ಸ್ ಆಂಡರ್ಸನ್, ಶೋಯೆಜ್ ಬಶೀರ್ ಹಾಗೂ ಹಾರ್ಟ್ಲಿ ತಲಾ ಒಂದು ವಿಕೆಟ್ ಪಡೆದರು. ಪ್ರಸ್ತುತ ಭಾರತ 53 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 192 ರನ್ ಗಳಿಸಿದೆ. ಯಶಸ್ವಿ ಜೈಸ್ವಾಲ್ ಅಜೇಯ 115* ಹಾಗೂ ರಜತ್ ಪಟಿದಾರ್ ಅಜೇಯ 2* ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.
That moment when @ybj_19 got to his second Test ?
Watch ??#INDvENG @IDFCFIRSTBank pic.twitter.com/Er7QFxmu4s
— BCCI (@BCCI) February 2, 2024


