Thursday, August 28, 2025
HomeUncategorizedಸಾಮಾಜಿಕ ಬದಲಾವಣೆಗೆ ತಕ್ಕಂತೆ ಸಂವಿಧಾನ ತಿದ್ದುಪಡಿಯಾಗಬೇಕು: ಬೊಮ್ಮಾಯಿ

ಸಾಮಾಜಿಕ ಬದಲಾವಣೆಗೆ ತಕ್ಕಂತೆ ಸಂವಿಧಾನ ತಿದ್ದುಪಡಿಯಾಗಬೇಕು: ಬೊಮ್ಮಾಯಿ

ದಾವಣಗೆರೆ: ಮುಂದಿನ ಬಾರಿಯೂ ನರೇಂದ್ರ‌ಮೋದಿಯವರೇ ಪ್ರಧಾನಿಯಾಗಲಿದ್ದು, ಅವರ ಅವಧಿಯಲ್ಲಿಯೇ ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿರುವುದನ್ನು ಸಂವಿಧಾನದ ಶೆಡ್ಯುಲ್ 9ಕ್ಕೆ ಸೇರಿಸಲು ಒತ್ತಾಯ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌

ಅವರು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಇದನ್ನೂ ಓದಿ: ಈಶ್ವರಪ್ಪ ಮೇಲೆ FIR ಆಗಿದೆ : ಡಾ.ಜಿ. ಪರಮೇಶ್ವರ್

ನಾಯಕ ಸಮುದಾಯವನ್ನು ಎಸ್ಟಿಗೆ ಸೇರಿಸಲು ದೊಡ್ಡ ಮಟ್ಟದ ಹೋರಾಟ ನಡೆದಿದೆ. ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿ ಯಾಗಿದ್ದಾಗಿದ್ದಾಗ ಶಿಫಾರಸ್ಸು ಮಾಡಿದ್ದರು, ಕೇಂದ್ರದಲ್ಲಿ ಚಂದ್ರಶೇಖರ ನೇತೃತ್ವದ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಮಾಜಿ ಪ್ರಧಾನಿ ದೇವೇಗೌಡರು ಎಸ್ಟಿಗೆ ಸೇರಿಸಲು ಶ್ರಮ ವಹಿಸಿದ್ದರು ಎಂದು ಹೇಳಿದರು.

ನಾಯಕ ಸಮುದಾಯಕ್ಕೆ ಎಸ್ಟಿಗೆ ಸೇರ್ಪಡೆ ಮಾಡಿದ ನಂತರ ಮೂವತ್ತೈದು ವರ್ಷಗಳ ನಂತರ ಈ ಸಮುದಾಯದ ಜನಸಂಖ್ಯೆ ಹೆಚ್ಚಾಗಿದೆ. ಆಶೋತ್ತರಗಳು ಹೆಚ್ಚಾಗಿವೆ. ನಮ್ಮ ಸಂವಿಧಾನ ಜೀವಂತಿಕೆ ಇರುವ ಸಂವಿಧಾನ, ಕಾಲಕ್ಕೆ ತಕ್ಕಂತೆ ತಿದ್ದುಪಡಿ ಮಾಡಲು ಅವಕಾಶ ಇದೆ. ಕೆಲವು ದೇಶದ ಸಂವಿಧಾನಗಳನ್ನು ಬರೆದು ಇಟ್ಟಿದ್ದಾರೆ. ಅವು ಜೀವಂತಿಕೆಯನ್ನು ಕಳೆದುಕೊಂಡಿವೆ. ದೇಶದಲ್ಲಿ ಕಾಲಕಾಲಕ್ಕೆ ಆಗುವ ಸಾಮಾಜಿಕ ಬದಲಾವಣೆಗೆ ತಕ್ಕಂತೆ ಸಂವಿಧಾನ ತಿದ್ದುಪಡಿ ಮಾಡಲು, ಸಮಾಜದ ಬೇಡಿಕೆಗಳಿಗೆ ಸ್ಪಂದಿಸುವ ಇಚ್ಚಾಶಕ್ತಿ ಬೇಕಿದೆ. ವಾಲ್ಮೀಕಿ ಸ್ವಾಮೀಜಿಗಳ ಹೋರಾಟದ ಫಲದಿಂದ ಎಸ್ಟಿ ಮೀಸಲಾತಿ ಪ್ರಮಾಣವನ್ನು ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಲು ನನಗೆ ಪ್ರೇರಣೆಯಾಯಿತು ಎಂದು ಹೇಳಿದರು.

ಮೀಸಲಾತಿ ಹೆಚ್ಚಳ ದಿಂದ ಎಸ್ಟಿ ಸಮುದಾಯಕ್ಕೆ ಸುಮಾರು 3500 ಹೆಚ್ಚು ಎಂಜನಿಯರಿಂಗ್ ಸೀಟುಗಳು, ಸುಮಾರು 400 ವೈದ್ಯಕೀಯ ಸೀಟುಗಳು ಹೆಚ್ಚುವರಿಯಾಗಿ ದೊರೆತಿವೆ. ಅಲ್ಲದೆ ಎಲ್ಲ ಇಲಾಖೆಗಳ ಬಡ್ತಿಯಲ್ಲಿ ಹೆಚ್ಚು ಅವಕಾಶಗಳು ದೊರೆತಿವೆ. ನಾವು ಮಾಡಿರುವ ಆದೇಶವನ್ನು ಈ ರಾಜ್ಯ ಸರ್ಕಾರ ಜಾರಿಗೊಳಿಸಬೇಕು. ಆ ಕೆಲಸವನ್ನು ವಾಲ್ಮೀಕಿ ಸ್ವಾಮೀಜಿ‌ ಈ ಸರ್ಕಾರ ದಿಂದ ಮಾಡಿಸಬೇಕು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments