ಫಿಲ್ಮಿ ಡೆಸ್ಕ್: ಟಾಲಿವುಡ್ನಲ್ಲಿ ನೂತನ ದಾಖಲೆ ಮಾಡಿದ ಸೂಪರ್ ಹಿಟ್ ಚಿತ್ರ ‘ಗೂಢಚಾರಿ’ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅಡಿವಿ ಶೇಷ್ ಅವರ ಅಭಿನಯದಲ್ಲಿ ಮೂಡಿಬಂದ ಆ್ಯಕ್ಷನ್-ಥ್ರಿಲ್ಲರ್ ಶೈಲಿಯ ಆ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮವಾಗಿ ಕಲೆಕ್ಷನ್ ಮಾಡಿತ್ತು. ಈಗ ಈ ಸಿನಿಮಾಗೆ ಸೀಕ್ವೆಲ್ ಸಿದ್ಧವಾಗುತ್ತಿರುವುದು ಕೂಡ ಗೊತ್ತಿದೆ. ‘ಗೂಢಚಾರಿ 2’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಈಗಾಗಲೇ ರಿಲೀಸ್ ಆಗಿ ಸಖತ್ ಸದ್ದು ಮಾಡಿದೆ. ಇದೀಗ ಗೂಢಚಾರಿ ಸೀಕ್ವೆಲ್ ಗೆ ಬಾಲಿವುಡ್ ಸ್ಟಾರ್ ಎಂಟ್ರಿಯಾಗಿದ್ದಾರೆ.
ಗೂಢಚಾರಿ 2 ಸಿನಿಮಾದಲ್ಲಿ ಬಾಲಿವುಡ್ ಖ್ಯಾತ ನಟ ಇಮ್ರಾನ್ ಹಶ್ಮಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಟೈಗರ್ 3 ಸಿನಿಮಾ ಮೂಲಕ ಪ್ರೇಕ್ಷಕರಿಂದ ಚಪ್ಪಾಳೆ ಪಡೆದಿರುವ ಅವರು, ಇದೀಗ ಟಾಲಿವುಡ್ ನತ್ತ ಹೆಜ್ಜೆ ಇಟ್ಟಿದ್ದಾರೆ. ಗೂಢಚಾರಿ ಬಳಗ ಇಮ್ರಾನ್ ಫಸ್ಟ್ ಲುಕ್ ರಿಲೀಸ್ ಮಾಡಿ ಅವರನ್ನು ಸ್ವಾಗತಿಸಿದೆ. ಆದ್ರೆ ಯಾವ ಪಾತ್ರದಲ್ಲಿ ಇಮ್ರಾನ್ ನಟಿಸುತ್ತಿದ್ದಾರೆ ಎಂಬ ಕುತೂಹಲವನ್ನು ಹಾಗೇ ಉಳಿಸಿಕೊಂಡಿದೆ.
ಇದನ್ನೂ ಓದಿ: ಮಾಜಿ ಸಿಎಂ ಚಂದ್ರಬಾಬು ನಾಯ್ಡು ವಿರುದ್ದ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಕೆ!
ಇಮ್ರಾನ್ ಹಶ್ಮಿ ಎಂಟ್ರಿಗೆ ಇಡೀ ಚಿತ್ರತಂಡ ಖುಷಿಯಾಗಿದೆ. ‘ಗೂಢಚಾರಿ 2’ ಸಿನಿಮಾ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಆಗಿದ್ದು, ದೊಡ್ಡ ಬಜೆಡ್ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಅಡಿವಿ ಶೇಷ್ ಅಭಿನಯಿಸಿದ್ದ ‘ಮೇಜರ್’ ಚಿತ್ರಕ್ಕೆ ಸಂಕಲನಕಾರ ಆಗಿದ್ದ ವಿನಯ್ ಕುಮಾರ್ ಸಿರಿಗಿನೀದಿ ಅವರು ‘ಗೂಢಚಾರಿ 2’ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ.
‘ಗೂಢಚಾರಿ 2’ ಚಿತ್ರಕ್ಕೆ ಅಡಿವಿ ಶೇಷ್ ಅವರೇ ಕಥೆ ಬರೆದಿದ್ದಾರೆ. ‘ಕಾರ್ತೀಕೇಯ 2’, ‘ಮೇಜರ್’ ಮತ್ತು ‘ದಿ ಕಾಶ್ಮೀರ್ ಫೈಲ್ಸ್’ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ನಿರ್ಮಾಣ ಸಂಸ್ಥೆಗಳು ‘ಗೂಢಚಾರಿ 2’ ಚಿತ್ರಕ್ಕೆ ಬಂಡವಾಳ ಹೂಡುತ್ತಿವೆ. ‘ಪೀಪಲ್ ಮೀಡಿಯಾ ಫ್ಯಾಕ್ಟರಿ’, ‘ಅಭಿಷೇಕ್ ಅಗರ್ವಾಲ್ ಆರ್ಟ್ಸ್’ ಹಾಗೂ ‘ಎ.ಕೆ. ಎಂಟರ್ಟೇನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್’ ಬ್ಯಾನರ್ ಮೂಲಕ ಟಿ.ಜಿ. ವಿಶ್ವಪ್ರಸಾದ್ ಹಾಗೂ ಅಭಿಷೇಕ್ ಅಗರ್ವಾಲ್ ಅವರು ಜೊತೆಯಾಗಿ ‘ಗೂಢಚಾರಿ 2’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಬನಿತಾ ಸಂಧು ಅಡಿವಿ ಶೇಷ್ ಗೆ ಜೋಡಿಯಾಗಿ ನಟಿಸುತ್ತಿದ್ದಾರೆ.



Pinco qeydiyyat prosesi çox sadədir. Pinco ilə qalib gəlmək indi daha asandır — pinco casino online. Pinco bet futbol həvəskarlarını sevindirir.
Pinco tətbiq istifadəçi dostudur.