Sunday, August 24, 2025
Google search engine
HomeUncategorizedಪುತ್ತಿಗೆ ಶ್ರೀಗಳ ಧರ್ಮ ಪ್ರಚಾರ ಕಾರ್ಯ ಅಭಿನಂದನೀಯ : ರವಿಶಂಕರ ಗುರೂಜಿ

ಪುತ್ತಿಗೆ ಶ್ರೀಗಳ ಧರ್ಮ ಪ್ರಚಾರ ಕಾರ್ಯ ಅಭಿನಂದನೀಯ : ರವಿಶಂಕರ ಗುರೂಜಿ

ಉಡುಪಿ : ದೇಶ ವಿದೇಶಗಳಲ್ಲಿ ನಿರಂತರವಾಗಿ ಸಂಚರಿಸುತ್ತಾ ಧರ್ಮ ಪ್ರಚಾರ ಕಾರ್ಯವನ್ನು ಯಶಸ್ವಿಯಾಗಿ ನಡೆಸುತ್ತಿರುವ ಪುತ್ತಿಗೆ ಶ್ರೀಪಾದರ ಕಾರ್ಯ ಅಭಿನಂದನೀಯವಾಗಿದೆ ಎಂದು ಅಂತರಾಷ್ಟ್ರೀಯ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮುಖ್ಯಸ್ಥ ಶ್ರೀ ರವಿಶಂಕರ ಗುರೂಜಿ ತಿಳಿಸಿದರು.

ಪುತ್ತಿಗೆ ಶ್ರೀಕೃಷ್ಣ ಮಠದಲ್ಲಿ ಮಾತನಾಡಿದ ಅವರು, ಆಹಾರಗಳ ನಿಯಮ, ಅನುಷ್ಠಾನಗಳ ಆಚರಣೆಗಳಿಂದ ಯತಿಧರ್ಮದ ಕಠಿಣ ಆಚರಣೆಯನ್ನು ನಡೆಸುತ್ತಾ ಶ್ರೀಕೃಷ್ಣ ಮಂದಿರಗಳನ್ನು ಪ್ರತಿಷ್ಠಾಪಿಸಿದ್ದಾರೆ ಎಂದರು.

ಕಳೆದ ನಲವತ್ತು ವರ್ಷಗಳ ಸುದೀರ್ಘವಾದ ಆತ್ಮೀಯತೆ ನಮ್ಮಿಬ್ಬರಲ್ಲಿ ದೃಢವಾಗಿದೆ. ಅವರ ಪರ್ಯಾಯವು ಅತ್ಯಂತ ಯಶಸ್ವಿಯಾಗಿ ನೆರವೇರಲಿ ಹಾಗೂ ಕೋಟಿ ಗೀತಾ ಲೇಖನ ಯಜ್ಞದ ಕಾರ್ಯಕ್ರಮವು ನಿರ್ವಿಘ್ನವಾಗಿ ನಡೆಯಲಿ ಎಂದು ಹೇಳಿದರು.

ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ಆಮಂತ್ರಣದಂತೆ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ಶ್ರೀ ರವಿಶಂಕರ ಗುರೂಜಿ ಅವರಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದಂಗಳವರು ಕಿರಿಯ ಪಟ್ಟದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದಂಗಳವರು ಆತ್ಮೀಯವಾಗಿ ಬರಮಾಡಿಕೊಂಡರು.

ಶ್ರೀಮಠದ ವಿದ್ವಾಂಸರಿಂದ ಪೂರ್ಣಕುಂಭ ಸ್ವಾಗತ

ಶ್ರೀಮಠದ ವಿದ್ವಾಂಸರು, ಅಧಿಕಾರಿಗಳು ಪೂರ್ಣಕುಂಭ ಸ್ವಾಗತವನ್ನು ನೀಡಿದರು. ದೇವರ ದರ್ಶನವನ್ನು ಮಾಡಿಸಿ, ದೇವರ ಪ್ರಸಾದವನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಕ್ಷೇತ್ರದ ಶಾಸಕರಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಅನೇಕ ಭಕ್ತರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments