Monday, August 25, 2025
Google search engine
HomeUncategorizedಮಳೆ ಹಾನಿ ಪ್ರದೇಶಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರಿಶೀಲನೆ..

ಮಳೆ ಹಾನಿ ಪ್ರದೇಶಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರಿಶೀಲನೆ..

ದಾವಣಗೆರೆ : ಈ ಬಾರಿ ರಾಜ್ಯದಲ್ಲಿ ಸುರಿದ ಹಿಂಗಾರು ಮಳೆಯಿಂದಾಗಿ ಸಾಕಷ್ಟು ಬೆಳೆ ನಾಶವಾಗಿದ್ದು. ಕೈಗೆ ಬಂದ ತುತ್ತು ಬಾಯಿಗೆ ಬರದ ಹಿನ್ನಲೆ ರೈತರು ಕಂಗಾಲಾಗಿದ್ದಾರೆ. ಆದ್ದರಿಂದ ಇಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಕೆಲ ಗ್ರಾಮಗಳಿಗೆ ಭೇಟಿ ನೀಡಿದ ಸಚಿವ. ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು 166ರಷ್ಟು ಹಿಂಗಾರು ಮಳೆಯಾಗಿದೆ. ಮಳೆಯಿಂದ ರಾಜ್ಯದಲ್ಲಿ ಒಟ್ಟು 122 ಜನರು ಮೃತಪಟ್ಟಿದ್ದಾರೆ
ಗುಡುಗು ಮಿಂಚು ನೀರಿನಲ್ಲಿ ಕೊಚ್ಚಿ ಹೋದಂತ ಪ್ರಕರಣಗಳಿಂದ ಜನರು ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಮಳೆಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಒಟ್ಟು ಹಿಂಗಾರು ಮಳೆಗೆ 120ಮನೆಗಳಿಗೆ  ಹಾನಿಯಾಗಿದೆ. ಸುಮಾರು 1.8.ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ, ಇದರ ಕುರಿತು ನಾಳೆ ನಾನು ಸಿಎಂರೊಂದಿಗೆ ಮಳೆ ಹಾನಿ ರಿವ್ಯೂ ಮೀಟಿಂಗ್ ಮಾಡ್ತೀನಿ. ಕಂದಾಯ-ತೋಟಗಾರಿಕೆ-ಕೃಷಿ ಮೂರು ಇಲಾಖೆ ಸೇರಿ 3 ದಿನದಲ್ಲಿ ಜಂಟಿ ಸಮೀಕ್ಷೆ ಪೂರ್ಣಗೊಳಿಸಿ. ಮನೆ ಕಳೆದುಕೊಂಡವರಿಗೆ ಪರಿಹಾರದ ಜೊತೆಗೆ ಸರ್ಕಾರಿ ಜಾಗದಲ್ಲಿ ಒಂದು ನಿವೇಶನ ಕೊಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಅನಧಿಕೃತ ಕಟ್ಟಿದ ಬಿದ್ದ ಮನೆಗೂ ಒಂದು ಲಕ್ಷ ಪರಿಹಾರಕ್ಕೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳ ಅಕೌಂಟ್ ನಲ್ಲಿ 600 ಕೋಟಿ ರೂಪಾಯಿಗೂ ಅಧಿಕ ಹಣ ಇದೆ. NDRF-SDRF ಮಾರ್ಗಸೂಚಿಯಂತೆ 15 ದಿನಗಳೊಳಗೆ ಬೆಳೆ ಹಾನಿ ಪರಿಹಾರ ನೀಡಬೇಕು. ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡ ವಿಚಾರಿಸುತ್ತೇನೆ ಎಂದು ಹಾರಿಕೆ ಉತ್ತರ ನೀಡಿ ಸಚಿವ ಕೃಷ್ಣ ಬೈರೇಗೌಡ ನುಣುಚಿಕೊಂಡರು

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments