ಸುಪ್ರೀಂ ಕೋರ್ಟ್‌ನ 51ನೇ CJI ಆಗಿ ಪ್ರಮಾಣವಚನ ಸ್ವೀಕರಿಸಿದ ನ್ಯಾ.ಸಂಜೀವ್‌ ಖನ್ನಾ

ದೆಹಲಿ : ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್ ಖನ್ನಾ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ನ್ಯಾಯಮೂರ್ತಿ ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ನಿರ್ಗಮಿತ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನಕ್ಕೆ ಈಗ ಸಂಜೀವ್ ಖನ್ನಾ ಏರುತ್ತಿದ್ದು, 2025ರ ಮೇ 13ರವರೆಗೆ ಅವರು ಸಿಜೆಐ ಆಗಿ ಅಧಿಕಾರದಲ್ಲಿ ಇರಲಿದ್ದಾರೆ.

ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಪಡಿಸಿದ ತೀರ್ಪು, ಸಂವಿಧಾನದ 370ನೆಯ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಕ್ರಮವನ್ನು ಎತ್ತಿಹಿಡಿದ ತೀರ್ಪು ಸೇರಿದಂತೆ ಸುಪ್ರೀಂ ಕೋರ್ಟ್ ನೀಡಿದ ಹಲವು ಮಹತ್ವದ ತೀರ್ಪುಗಳಲ್ಲಿ ಖನ್ನಾ ಅವರ ಪಾಲು ಕೂಡ ಇದೆ.

RELATED ARTICLES

Related Articles

TRENDING ARTICLES