ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಹೈಕೋರ್ಟ್ನಲ್ಲಿ ಜಾಮೀನು ನೀಡದ ಹಿನ್ನಲೆ ಸುಪ್ರಿಂ ಮೆಟ್ಟಿಲನ್ನು ಹತ್ತಿದ್ದ ಪ್ರಜ್ವಲ್ಗೆ ಮತ್ತೆ ನಿರಾಸೆಯಾಗಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಪ್ರಜ್ವಲ್ ರೇವಣ್ಣಗೆ ಹಿನ್ನೆಡೆಯಾಗಿದ್ದು.
ಆರು ತಿಂಗಳು ಬಿಟ್ಟು ಮತ್ತೆ ಜಾಮೀನು ಕೋರಿ ಅರ್ಜಿ ಸಲ್ಲಿಸಲೇ ಎಂದು ಪ್ರಜ್ವಲ್ ಪರ ವಕೀಲ ಮುಕುಲ್ ರೋಹಟಗಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ನಾನು ಏನನ್ನೂ ಹೇಳಲ್ಲ ಎಂದ ಸುಪ್ರೀಂಕೋರ್ಟ್ ಪ್ರತಿಕ್ರಿಯೆ ನೀಡಿದೆ.


