ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಸರಣಿಯ ಎರಡು ವಾರಗಳ ಮೊದಲು ಪರ್ತ್ ತಲುಪಿದ್ದಾರೆ. ನವೆಂಬರ್ 22 ರಿಂದ ಪರ್ತ್‌ನಲ್ಲಿ ಬ್ಲಾಕ್‌ಬಸ್ಟರ್ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿ ಪ್ರಾರಂಭವಾಗುವ ಎರಡು ವಾರಗಳ ಮೊದಲು, ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಭಾನುವಾರ ಸಂಜೆ ಆಸ್ಟ್ರೇಲಿಯಾಗೆ ತೆರಳಿದ್ದಾರೆ.
ಶನಿವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಮತ್ತು ಮಕ್ಕಳೊಂದಿಗೆ ಕಾಣಿಸಿಕೊಂಡಿದ್ದರು. ಪರ್ತ್‌ಗೆ ಹೊರಡುವ ಮೊದಲು ಅವರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು, ಅಲ್ಲಿ ಅವರು ತಮ್ಮ ಮಕ್ಕಳ ಚಿತ್ರಗಳನ್ನು ತೆಗೆದುಕೊಳ್ಳದಂತೆ ಮನವಿ ಮಾಡಿದರು.
ನವೆಬರ್ 22ರಿಂದ ನಡೆಯುವ ಟೆಸ್ಟ್ ಸರಣಿಗೆ ಭಾರತದ ತಂಡ ಬ್ಯಾಚ್‌ಗಳಲ್ಲಿ ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ ಎಂದು ವರದಿಯಾಗಿದೆ.ಆದರೆ ರೋಹಿತ್ ತನ್ನ ಎರಡನೇ ಮಗುವಿನ ಜನನದ ಕಾರಣ ಆಪ್ಟಸ್ ಸ್ಟೇಡಿಯಂನಲ್ಲಿ ಆರಂಭಿಕ ಟೆಸ್ಟ್ ಪಂದ್ಯವನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು ಈ ಹಿಂದೆ ವರದಿಯಾಗಿತ್ತು ಆದರೆ ಇದರ ಬಗ್ಗೆ ಯಾವುದೇ ವರದಿಗಳಾಗಿಲ್ಲ.


