ಭೀಕರ ರಸ್ತೆ ಅಪಘಾತ : ಇಬ್ಬರು ಸಾ*ವು, ಐವರಿಗೆ ಗಂಭೀರ ಗಾಯ !

ರಾಮನಗರ: ಹೊಸ ವರ್ಷದಂದೆ ಭೀಕರ ರಸ್ತೆ ಅಪಘಾತವಾಗಿದ್ದು. ಟೀ ಕುಡಿಯಲು ಎಂದು ಹೋಗುವ ವೇಳೆ ಕಾರ್ ಪಲ್ಟಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ್ದು. ಐದು ಜನರಿಗೆ ಗಂಭೀರವಾಗಿ ಗಾಯವಾಗಿದೆ. ಗಾಯಗೊಂಡವರನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮೂಲತಃ ಮಾಗಡಿ ತಾಲ್ಲೂಕಿನ ಚೋಳನಾಯಕನಹಳ್ಳಿ ಗ್ರಾಮದವರಾದ ಸ್ನೇಹಿತರು ಟೀ ಕುಡಿಯಲು ಎಂದು ಹೋಗುವ ವೇಳೆ ಅವಘಡ ಸಂಭವಿಸಿದೆ. ಇನ್ನೋವ ಕ್ರಿಸ್ಟ್​ ಕಾರಿನಲ್ಲಿ ಹೋಗುವ ವೇಳೆ ಮಾಗಡಿ ತಾಲ್ಲೂಕಿನ ಹೊಸಪಾಳ್ಯದ, ಜನತಾ ಕಾಲೋನಿ ಬಳಿ ಕಾರ್​ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.

ಇದನ್ನೂ ಓದಿ : ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾದ ತೇಜಸ್ವಿ ಸೂರ್ಯ : ಯಾರಿದು ಸಿವಶ್ರೀ ಸ್ಕಂದಕುಮಾರ್ !

ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಮಂಜು(31) ಮತ್ತು ಕಿರಣ್ (30) ಎಂಬುವವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಉಳಿದ 5 ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದು. ಅವರನ್ನು ಮಾಗಡಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆ ಸಂಬಂಧ ಮಾಗಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

 

RELATED ARTICLES

Related Articles

TRENDING ARTICLES