ರಾಮನಗರ : ನಿಂತಿದ್ದ ಕ್ಯಾಂಟರ್ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ರಾಮನಗರದ ಕನಕಪುರದಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ನಿರಂಜನ್ ಮತ್ತು ವಿಶ್ವನಾಥ್ ಎಂದು ಗುರುತಿಸಲಾಗಿದೆ.
ಹೊಸ ವರ್ಷದ ಸಂಭ್ರಮಾಚರಣೆಗೆ ಬಂದಿದ್ದ ಯುವಕರು, ಎಲ್ಲ ಸೆಲಬ್ರೇಶನ್ ಮುಗಿಸಿ ವಾಪಾಸ್ ಹೋಗುವಾಗ ಅಪಘಾತ ಸಂಭವಿಸಿದೆ. ರಾಮನಗರ ಜಿಲ್ಲೆಯ, ಕನಕಪುರ ತಾಲ್ಲೂಕಿನ, ಸಾತನೂರು ಬಳಿಯಲ್ಲಿ ನಿಂತಿದ್ದ ಕ್ಯಾಂಟರ್ಗೆ ನಿಯಂತ್ರಣ ತಪ್ಪಿದ ಸಿಫ್ಟ್ ಕಾರ್ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ : ಭೀಕರ ರಸ್ತೆ ಅಪಘಾತ : ಇಬ್ಬರು ಸಾ*ವು, ಐವರಿಗೆ ಗಂಭೀರ ಗಾಯ !
ಅಪಘಾತದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೆ ಸಾವನ್ನಪ್ಪಿದ್ದು. ಮೃತರನ್ನು ಬೆಂಗಳೂರು ಮೂಲದ ವಿಶ್ವನಾಥ್(42) ಮತ್ತು ನಿರಂಜನ್ (41) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯವಾಗಿದ್ದು. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


