ರಾಮನಗರ : ಹೊಸ ವರ್ಷದ ದಿನವೇ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು. KSRTC ಬಸ್ ಬ್ರೇಕ್ ಫೇಲ್ ಆದ ಪರಿಣಾಮ ಬಸ್ ತಡೆಗೋಡೆಗೆ ಡಿಕ್ಕಿಯಾಗಿದೆ. ಈ ವೇಳೆ ಬಸ್ನಲ್ಲಿ ಐವತಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಕನಕಪುರ ತಾಲೂಕಿನ ಸಂಗಮದ ರಸ್ತೆಯಲ್ಲಿ ಘಟನೆ ನಡೆದಿದ್ದು. ರಸ್ತೆಯ ತಿರುವಿನಲ್ಲಿ ಬಸ್ನ ಬ್ರೇಕ್ ಫೇಲ್ ಆದ ಪರಿಣಾಮ ಬಸ್ ರಸ್ತೆಯ ತಡಗೋಡೆಗೆ ಡಿಕ್ಕಿ ಹೊಡೆದು ನಿಂತಿಕೊಂಡಿದೆ. ಈ ವೇಳೆ ಬಸ್ನಲ್ಲಿ 100ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಒಂದು ವೇಳೆ ಪ್ರಪಾತಕ್ಕೆ ಉರುಳಿದ್ದರೆ ಭಾರೀ ದೊಡ್ಡ ದುರಂತ ಸಂಭವಿಸುತ್ತಿತ್ತು. ಆದರೆ ಅದೃಷ್ಟವಶಾತ್ ಭಾರೀ ದುರ್ಘಟನೆಯೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.
ಇದನ್ನೂ ಓದಿ: ಪ್ರೀತಿಯಿಂದ ಸಾಕಿದ್ದ ನಾಯಿ ಸಾವು : ನೇಣಿಗೆ ಶರಣಾದ ಯುವಕ !
ಘಟನಾ ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಘಟನೆ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ಮಾಹಿತಿ ದೊರೆತಿದೆ.


