ಪತ್ನಿ ಕಿರುಕುಳಕ್ಕೆ ಪತಿ ಆತ್ಮಹತ್ಯೆ : ಗಂಡನ ಶವ ನೋಡಲು ಬಂದ ಹೆಂಡತಿಗೆ ಬಿತ್ತು ಗೂಸಾ !

ಹಾಸನ : ಪತ್ನಿ ನಂದಿನಿಯ ಕಿರುಕುಳ ಸಹಿಸದೆ ಸಾಫ್ಟ್​ವೇರ್​ ಇಂಜಿನಿಯರ್ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು. ಮೃತ ಪತಿಯ ಮುಖ ನೋಡಲು ಬಂದ ಮಹಿಳೆಗೆ ಮೃತ ವ್ಯಕ್ತಿಯ ಕುಟುಂಬಸ್ಥರು ಹಲ್ಲೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.

ಬೆಂಗಳೂರಿನ ಬೆಂಜ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಮೋದ್​ ಕೌಟುಂಬಿಕ ಕಲಹಕ್ಕೆ ಬೇಸತ್ತು ಹೇಮಾವತಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದನು. ಮೃತನ ದೇಹವನ್ನು ನೀರಿನಿಂದ ಮೇಲೆಕ್ಕೆತ್ತಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತ ದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದರು.

ಇದನ್ನೂ ಓದಿ : ಸ್ವಂತ ತಾಯಿ, ನಾಲ್ವರು ಸಹೋದರಿಯರನ್ನು ಕೊ*ಲೆ ಮಾಡಿ, ವಿಡಿಯೋ ಮಾಡಿದ ದುರುಳ !

ಇಂದು ಗಂಡನ ಶವ ನೋಡಲು ಪ್ರಮೋದ್​ನ ಪತ್ನಿ ನಂದಿನಿ ಮತ್ತು ಆಕೆಯ ಕುಟುಂಬಸ್ಥರು ಜಿಲ್ಲಾಸ್ಪತ್ರೆಯ ಶವಗಾರದ ಬಳಿಗೆ ಬಂದಿದ್ದು. ಈ ವೇಳೆ ಆಕ್ರೋಶಗೊಂಡ ಪ್ರಮೋದ್​ ಕುಟುಂಬಸ್ಥರು ಮೃತನ ಪತ್ನಿಯನ್ನು ಮತ್ತು ಆಕೆಯ ತಾಯಿಯನ್ನು ಹೊಡೆಯಲು ಅಟ್ಟಾಡಿಸಿದ್ದಾರೆ. ಈ ವೇಳೆ ಎರಡು ಕುಟುಂಬಗಳ ನಡುವೆ ವಾಗ್ವಾದವಾಗಿದೆ ಎಂದು ಮಾಹಿತಿ ದೊರೆತಿದೆ.

ಪ್ರಮೋದ್ ಕುಟುಂಬಸ್ಥರು ಮಹಿಳೆಯನ್ನು ಮತ್ತು ಆಕೆಯ ತಾಯಿಯ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದು. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಮಹಿಳೆಯರನ್ನು ರಕ್ಷಿಸಿ ಕರೆದೊಯ್ದಿದ್ದಾರೆ. ಈ ವೇಳೆ ಅಲ್ಲಿ ನೆರೆದಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಆಲೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

Related Articles

TRENDING ARTICLES