Monday, September 15, 2025
HomeUncategorizedಚನ್ನರಾಯಪಟ್ಟಣ ತಾಲೂಕಿನಲ್ಲಿ 14 ದಿನ ಸ್ವಯಂಪ್ರೇರಿತ ಲಾಕ್ ಡೌನ್ ಗೆ ನಿರ್ಧಾರ..!

ಚನ್ನರಾಯಪಟ್ಟಣ ತಾಲೂಕಿನಲ್ಲಿ 14 ದಿನ ಸ್ವಯಂಪ್ರೇರಿತ ಲಾಕ್ ಡೌನ್ ಗೆ ನಿರ್ಧಾರ..!

ಹಾಸನ : ಹಾಸನ ಜಿಲ್ಲೆಯಲ್ಲಿ ಅತಿ ಹೆಚ್ಚಾಗಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದು ಚನ್ನರಾಯಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ಸಭೆಯಲ್ಲಿ ವರ್ತಕ ಸಂಘದ ಮುಖಂಡರು, ಬೀದಿಬದಿ ವ್ಯಾಪಾರಿಗಳ ಮುಖಂಡರು, ಕೂಲಿಕಾರ್ಮಿಕರ ಸಂಘ-ಸಂಸ್ಥೆಗಳ ಮುಖಂಡರು ಸ್ವಯಂ ಘೋಷಿತವಾಗಿ 14 ದಿನಗಳವರೆಗೆ ತಾಲೂಕಿನಾದ್ಯಂತ ಲಾಕ್ಡೌನ್ ಮಾಡಲು ನಿರ್ಧರಿಸಿದ್ದಾರೆ.

ಭಾನುವಾರ ಸರ್ಕಾರವೇ ಲಾಕ್ಡೌನ್ ಘೋಷಿಸಿರುವುದರಿಂದ ವಾರದಲ್ಲಿ ಮೂರು ದಿನ ಮಾತ್ರ ಅಗತ್ಯವಸ್ತುಗಳನ್ನು  ಬೆಳಗ್ಗೆ 11.30 ರವರೆಗೆ ಮಾತ್ರ ಮಾರಾಟ ಮಾಡಬಹುದಾಗಿರುತ್ತದೆ ಸೋಮುವಾರ, ಬುಧವಾರ, ಶುಕ್ರವಾರದಂದು ಅಗತ್ಯ ವಸ್ತುಗಳಾದ ಹಾಲು, ತರಕಾರಿ, ದಿನಸಿ ಪದಾರ್ಥಗಳು ಮಾತ್ರ ಮಾರಾಟ ಮಾಡಲಾಗುತ್ತದೆ.
ಕೃಷಿ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳನ್ನು ತಾಲೂಕಿನಾದ್ಯಂತ ನಿರ್ಬಂಧಿಸುವಂತೆ ತಾಲೂಕು ಆಡಳಿತ ಜನಪ್ರತಿನಿಧಿಗಳು ಸೂಚಿಸಿದ್ದಾರೆ.‌ ಸ್ವಯಂಘೋಷಿತ ಲಾಕ್ಡೌನ್ ಗೆ ತಾಲೂಕಿನ ಎಲ್ಲ ಜನತೆ ಸಹಕರಿಸುವಂತೆ ಶಾಸಕರಾದ ಸಿ.ಎನ್. ಬಾಲಕೃಷ್ಣ, ವಿಧಾನಪರಿಷತ್ ಸದಸ್ಯರಾದ ಎಂ.ಎ ಗೋಪಾಲಸ್ವಾಮಿ, ತಾಲೂಕು ದಂಡಾಧಿಕಾರಿಗಳಾದ ಜೆ .ಬಿ. ಮಾರುತಿ ಹಾಗೂ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ವಿನಂತಿ ಮಾಡಿದ್ದಾರೆ. ಈಗಾಗಲೇ ಜಿಲ್ಲಾಧಿಕಾರಿಗಳು ಕೂಡ ತುರ್ತು ಅಗತ್ಯವಿಲ್ಲದಿದ್ದರೆ ಯಾವುದೇ ಇಲಾಖೆಗಳಿಗೆ ಎರಡು ತಿಂಗಳು ಭೇಟಿ ಕೊಡದೆ ತಮ್ಮ ಮನೆಯಲ್ಲಿಯೇ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳುವಂತೆ ವಿನಂತಿ ಮಾಡಿದ್ದಾರೆ.
ಮನೆಯಿಂದ ಹೊರ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಿದ್ದು ತಪ್ಪಿದ್ದಲ್ಲಿ ದಂಡ ವಿಧಿಸಲಾಗುತ್ತದೆ. ಬೆಂಗಳೂರು ಮೈಸೂರು ಹಾಗೂ ಇತರೆ ಪಟ್ಟಣಗಳಿಂದ ತಾಲೂಕಿಗೆ ಖಾಸಗಿ ವಾಹನ ಹಾಗೂ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಆಗಮಿಸುವವರಿಗೆ ಕೈಗೆ ಸೀಲ್ ಹಾಕುವುದರ ಸಮೇತ ಮನೆಯಲ್ಲಿಯೇ ಇರಬೇಕಾಗುತ್ತದೆ. ಕೊರೊನಾ ಲಕ್ಷಣಗಳು ಕಂಡುಬಂದಲ್ಲಿ ಕೊರೊನಾ ಸೆಂಟರ್ ಗೆ ಕಳುಹಿಸಲಾಗುತ್ತದೆ ಎಂದು ತಿಳಿಸಿದರು. ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದಲ್ಲಿ ಮಾತ್ರ ಪ್ರಯಾಣಿಕರು ಬರಬಹುದಾಗಿರುತ್ತದೆ ಪಟ್ಟಣದ ಇತರೆ ಕಡೆ ಬಸ್ಸು ನಿಲ್ಲಿಸುವುದಿಲ್ಲ.
ಕೊರೊನಾ ಸೋಂಕು ತಡೆಯುವಲ್ಲಿ ಸಾರ್ವಜನಿಕರು ಸ್ವಯಂ ನಿರ್ಧಾರ ತೆಗೆದುಕೊಂಡು ಸಹಕರಿಸುವಂತೆ ಮನವಿ ಮಾಡಲಾಯಿತು. ಸಹಕರಿಸದೆ ಇರುವವರಿಗೆ ಆರಕ್ಷಕ ಇಲಾಖೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments