Tuesday, August 26, 2025
Google search engine
HomeUncategorizedಲಕ್ಷ್ಮೀ ಹೆಬ್ಬಾಳ್ಕರ್​ಗೆ ಪ್ರಾಸ್ಟಿಟ್ಯೂಟ್​ ಪದ ಬಳಕೆ ವಿಚಾರ: ಸಿ.ಟಿ ರವಿ ಹೈಕೋರ್ಟ್ ಬಿಗ್​ ರಿಲೀಫ್​ !

ಲಕ್ಷ್ಮೀ ಹೆಬ್ಬಾಳ್ಕರ್​ಗೆ ಪ್ರಾಸ್ಟಿಟ್ಯೂಟ್​ ಪದ ಬಳಕೆ ವಿಚಾರ: ಸಿ.ಟಿ ರವಿ ಹೈಕೋರ್ಟ್ ಬಿಗ್​ ರಿಲೀಫ್​ !

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಬಿಜೆಪಿ ಪರಿಷತ್‌ ಸದಸ್ಯ ಸಿಟಿ ರವಿ ಅವರಿಗೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್‌ ನೀಡಿದೆ.

ಸಿಟಿ ರವಿ ಎಫ್​ಐಆರ್​ ರದ್ದು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ತನಿಖೆಯ ವ್ಯಾಪ್ತಿಯ ಪ್ರಶ್ನೆಯನ್ನು ತೀರ್ಮಾನಿಸಬೇಕಿದೆ ಎಂದು ಅಭಿಪ್ರಾಯಪಟ್ಟು ಫೆ.20ರವರಗೆ ಅರ್ಜಿ ವಿಚಾರಣೆಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :ಪಾರ್ಟಿಯಿಂದ ಹೊರಗೆ ಹಾಕೋದಾದರೆ ನಾವು ರೆಡಿ ಇದ್ದೇವೆ : ಯತ್ನಾಳ್​

ಸಿಟಿ ರವಿ ಪರ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ, ಸದನದೊಳಗೆ ಭೀತಿರಹಿತವಾಗಿ ಮಾತನಾಡಲು ಅವಕಾಶವಿದೆ. ಮಾನನಷ್ಟ ಪ್ರಕರಣದ ಭೀತಿಯಿಲ್ಲದೇ ಚರ್ಚೆ ನಡೆಸಬಹುದು. ಮಹಿಳೆ ಗೌರವಕ್ಕೆ ಧಕ್ಕೆಯಾಗುವ ಮಾತುಗಳಿದ್ದರೂ ಸಭಾಪತಿ ಕ್ರಮ ಕೈಗೊಳ್ಳಬಹುದು ಎಂದು ಹೇಳಿದರು.

ಇದಕ್ಕೆ ಪ್ರತಿಯಾಗಿ ಲಕ್ಷ್ಮೀ ಹೆಬ್ಬಾಳ್ಕರ್​ ಪರವಾಗಿ ವಾದ ಮಂಡಿಸಿದ ಎಸ್‌ಪಿಪಿ ಬಿ.ಎ.ಬೆಳ್ಳಿಯಪ್ಪ ಅವರು,ರವಿ ಅವರ ಧ್ವನಿ ಮಾದರಿ ಪಡೆಯಲು ಅವಕಾಶ ನೀಡಬೇಕೆಂದು. ಸದನದ ವ್ಯಾಪ್ತಿಯ ಚರ್ಚೆಗೆ ಮಾತ್ರ ಕ್ರಮದಿಂದ ವಿನಾಯಿತಿ ಇದೆ. ಟೇಬಲ್ ಮುರಿದು ದಾಂಧಲೆ, ಅಶ್ಲೀಲ ಪದ ಬಳಕೆಗೆ ವಿನಾಯಿತಿ ಇಲ್ಲ ಎಂದು ವಾದಿಸಿದರು.
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments