ಫೈಜಾಬಾದ್: ಅಯೋಧ್ಯೆಯಲ್ಲಿ 22 ವರ್ಷದ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿದ್ದ ಯುವತಿಯೊಬ್ಬಳನ್ನು ಕಣ್ಣುಗುಡ್ಡೆ ಕಿತ್ತು, ಬಟ್ಟೆ ಹರಿದು ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿರುವ ಘಟನೆ ಅಯೋಧ್ಯೆಯ ಬಳಿ ವರದಿಯಾಗಿದೆ. ಘಟನೆ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿರುವ ಅಯೋದ್ಯ ಸಂಸದ ಕ್ಯಾಮರಗಳ ಮುಂದೆ ಗಳಗಳನೆ ಕಣ್ಣೀರಿಟ್ಟಿದ್ದಾನೆ.
ಹೌದು.. ಕಳೆದ ಜನವರಿ 30 ರಂದು 22 ವರ್ಷದ ಯುವತಿ ಧಾರ್ಮಿಕ ಕಾರ್ಯಕ್ರಮಕ್ಕೆ ಎಂದು ಹೋಗಿದ್ದಳು. ಆದರೆ ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಪೋಷಕರು ಆತಂಕಗೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಈ ವೇಳೆ ಪೊಲೀಸರು ದೂರು ದಾಖಲಿಸಿಕೊಳ್ಳದೆ, ನಿಮ್ಮ ಮಗಳನ್ನು ನೀವೆ ಹುಡುಕಿಕೊಳ್ಳಿ ಎಂದು ಹೇಳಿದ್ದಾರೆ ಎಂದು ಮೃತ ಯುವತಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಇದನ್ನೂ ಓದಿ :ಒಣ ಮೆಣಸಿನಕಾಯಿ ದರ ಕುಸಿತ: ಕಂಗಾಲಾದ ರೈತ !
ಕೊನೆಗೆ ಅಯೋಧ್ಯೆಯ ಕಾಲುವೆಯೊಂದರಲ್ಲಿ ಯುವತಿಯ ಮೃತದೇಹ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿ ಪತ್ತೆಯಾಗಿದೆ.ಮೃತದೇಹದ ಮೇಲೆ ಬಟ್ಟೆ ಇರಲಿಲ್ಲ. ಕಣ್ಣುಗುಡ್ಡೆ ಕಿತ್ತುಹಾಕಲಾಗಿದೆ. ದೇಹದ ಹಲವೆಡೆ ಗಂಭೀರ ಗಾಯಗಳಾಗಿವೆ. ಕೈಕಾಲುಗಳನ್ನು ಹಗ್ಗಗಳಿಂದ ಕಟ್ಟಲಾಗಿತ್ತು ಆಕೆಯ ಮೇಲೆ ಅತ್ಯಾಚಾರ ನಡೆಸಿ ನಂತರ ಕೊಲ್ಲಲಾಗಿದೆ ಎಂದು ಪೋಷಕರು ಶಂಕಿಸಿದ್ದಾರೆ.
ಘಟನೆ ಕುರಿತು ಪೋಷಕರು ಶುಕ್ರವಾರ ದೂರು ದಾಖಲಿಸಿಕೊಂಡಿದ್ದು. ತನಿಖೆ ನಡೆಸಲಾಗುತ್ತಿದೆ ಎಂದು ಅಶುತೋಶ್ ತಿವಾರಿ ತಿಳಿಸಿದ್ದಾರೆ. ಶವವನ್ನು ಶವ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಕುರಿತು ಫೈಜಾಬಾದ್ ಸಂಸದ ಅವಧೇಶ್ ಪ್ರಸಾದ್ ತನ್ನ ದುಃಖವನ್ನು ತೋಡಿಕೊಂಡು ತಮ್ಮ ಸಂಸದ ಸದಸ್ಯತ್ವಕ್ಕೆ ರಾಜೀನಾಮೇ ನೀಡುತ್ತಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ :ಎಲ್ಲವೂ ಚೆನ್ನಾಗಿತ್ತು, ಸ್ಮಾರ್ಟ್ಪೋನ್ ಬಂದು ನಮ್ಮ ಜೀವನವೇ ಹಾಳಾಯ್ತು !
ಜೊತೆಗೆ ನಾವು ಓರ್ವ ಹೆಣ್ಣು ಮಗಳನ್ನು ಉಳಿಸುವಲ್ಲಿ ವಿಫಲರಾಗಿದ್ದು. “ಮರ್ಯಾದಾ ಪುರುಷೋತ್ತಮ ಶ್ರೀರಾಮ, ತಾಯಿ ಸೀತಾ, ನೀವು ಎಲ್ಲಿದ್ದೀರಿ?” ಎಂದು ಅಳುತ್ತಾ ಸಂಸದರು ಪ್ರಶ್ನಿಸಿದ್ದಾರೆ.


