Friday, August 29, 2025
HomeUncategorizedಪಾಕ್​ ಪರ ಘೋಷಣೆ ಕೂಗಿದವನ ಹತ್ಯೆ ಪ್ರಕರಣ: ಕರ್ತವ್ಯ ಲೋಪವೆಸಗಿದ ಮೂವರು ಪೊಲೀಸರು ಸಸ್ಪೆಂಡ್​

ಪಾಕ್​ ಪರ ಘೋಷಣೆ ಕೂಗಿದವನ ಹತ್ಯೆ ಪ್ರಕರಣ: ಕರ್ತವ್ಯ ಲೋಪವೆಸಗಿದ ಮೂವರು ಪೊಲೀಸರು ಸಸ್ಪೆಂಡ್​

ಮಂಗಳೂರು: ಪಾಕ್​ ಪರ ಘೋಷಣೆ ಕೂಗಿದ್ದಾನೆ ಎಂದು ಆರೋಪಿಸಿ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸ್​ ಠಾಣೆಯ ಇನ್ಸ್​ಪೆಕ್ಟರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ.

ಏ.27ರ ಭಾನುವಾರ ಸಂಜೆ 5:30ರ ಸುಮಾರಿಗೆ ಮಂಗಳೂರಿನ ಹೊರವಲಯದ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ತಕ್ಷಣ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಅನುಮಾನಾಸ್ಪದ, ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದರು. ಮೃತದೇಹದ ಮರಣೋತ್ತರ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮೃತನ ಬೆನ್ನಿಗೆ ಬಲವಾದ ಹೊಡೆತ ಬಿದ್ದಿದೆ. ಗಂಭೀರ ಗಾಯಗೊಂಡ ಕಾರಣದಿಂದ ಉಂಟಾದ ರಕ್ತಸ್ರಾವದಿಂದ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿತ್ತು.

ಇದನ್ನೂ ಓದಿ:ಜಾತಿ ಗಣತಿಗೆ ಆಗ್ರಹಿಸಿ ಮೋದಿಗೆ ಪತ್ರ ಬರೆದಿದ್ದೆ; ಕೇಂದ್ರ ಸರ್ಕಾರ ಒಳ್ಳೆ ಕೆಲಸ ಮಾಡಿದೆ: ಮಲ್ಲಿಕಾರ್ಜುನ್​ ಖರ್ಗೆ

ಇನ್ನು ಈ ಪ್ರಕರಣದ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ಥಳೀಯ ನಿವಾಸಿ ದೀಪಕ್ ಕುಮಾರ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ 19 ಮಂದಿ ಮತ್ತು ಇತರರ ವಿರುದ್ದ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪದಡಿ ಇನ್ಸ್‌ಪೆಕ್ಟರ್‌ ಶಿವಕುಮಾರ್, ಹೆಡ್ ಕಾನ್ಸ್‌ಟೇಬಲ್ ಚಂದ್ರ.ಪಿ ಮತ್ತು ಕಾನ್ಸ್‌ಟೇಬಲ್‌ ಯಲ್ಲಾಲಿಂಗ ಅವರನ್ನು ಅಮಾನತು ಮಾಡಲಾಗಿದೆ. ಮೂವರ ವಿರುದ್ಧ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಆರೋಪ ಕೇಳಿ ಬಂದಿತ್ತು,

ಇದನ್ನೂ ಓದಿ:ಗ್ಯಾಸ್​ ಸಿಲಿಂಡರ್​ ಲೀಕ್​: ಮನೆಯಲ್ಲಿ ಹಚ್ಚಿದ್ದ ದೀಪದಿಂದ ಇಬ್ಬರು ಸಜೀವ ದಹನ

ಶಿವಕುಮಾರ್ ಆರಂಭದಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿದ್ದರು. ವಿವಾದ ದೊಡ್ಡದಾದ ಮೇಲೆ ಕೊಲೆ ಪ್ರಕರಣ ದಾಖಲಿಸಿದ್ದರು. ಇದಾದ ಬಳಿಕ ಶಿವಕುಮಾರ್ ಅವರನ್ನು ಅಮಾನತು ಮಾಡುವಂತೆ ಗೃಹ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments