ಪಹಲ್ಗಾಮ್ನಲ್ಲಿ ನಡೆದಿರುವ ಉಗ್ರ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನದ ಮೇಲೆ ಪ್ರತಿಕಾರ ತೀರಿಸಿಕೊಂಡಿದ್ದು. ಇದಕ್ಕೆ ಪ್ರತಿಯಾಗಿ ಪಾಕ್ ದಾಳಿ ನಡೆಸಿ ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಘ್ನಗೊಳಿಸಿದೆ. ಈ ಕುರಿತು ನಟ ಯಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು. ಭಾರತ ಮತ್ತು ಪಾಕ್ ನಡುವಿನ ಯುದ್ಧ ಸನ್ನಿವೇಶ ಕುರಿತು ತಪ್ಪು ಮಾಹಿತಿ ಹಂಚಿಕೊಳ್ಳಬೇಡಿ ಎಂದು ಯಶ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ :ಪಾಕಿಸ್ತಾನದ ಮೇಲಿನ ದಾಳಿ ದೇಶದ ಸ್ವಾಭಿಮಾನ ಮತ್ತು ನೈತಿಕತೆಯನ್ನು ಹೆಚ್ಚಿಸಿದೆ: ಆರ್ಎಸ್ಎಸ್
— Yash (@TheNameIsYash) May 9, 2025
ಸಾಮಾಜಿಕ ಜಾಲತಾಣ ಎಕ್ಷ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ನಟ ಯಶ್ ‘ನಮ್ಮ ಭಾರತೀಯ ಸಶಸ್ತ್ರ ಪಡೆಗಳ ಅಚಲ ಶಕ್ತಿ ಮತ್ತು ಕಾರ್ಯಕ್ಕೆ ಧನ್ಯವಾದಗಳು. ಭಾರತೀಯ ಯೋಧರ ಸೇವೆಗೆ ಧನ್ಯವಾದ ತಿಳಿಸುವುದರ ಜೊತೆಗೆ ಒಗ್ಗಟ್ಟಿನಿಂದ ನಿಂತು ಜವಾಬ್ದಾರಿಯುತವಾಗಿ ವರ್ತಿಸೋಣ. ಸಾಮಾಜಿಕ ಜಾಲತಾಣದಲ್ಲಿ ಯಾವುದಾದರೂ ವಿಚಾರ ಹಂಚಿಕೊಳ್ಳುವ ಮುನ್ನ ಮೊದಲು ಪರಿಶೀಲಿಸಿ ಎಂದಿದ್ದಾರೆ. ತಪ್ಪು ಮಾಹಿತಿಯ ವಿರುದ್ಧ ನಿಲ್ಲೋಣ. ಜೈ ಹಿಂದ್ ಎಂದು ಯಶ್ ಬರೆದುಕೊಂಡಿದ್ದಾರೆ