Monday, August 25, 2025
Google search engine
HomeUncategorizedಕದನ ವಿರಾಮದ ನಡುವೆ ಐಪಿಎಲ್​ ಪುನರಾರಂಭ: ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್​

ಕದನ ವಿರಾಮದ ನಡುವೆ ಐಪಿಎಲ್​ ಪುನರಾರಂಭ: ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್​

ಬೆಂಗಳೂರು: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಏರ್ಪಟ್ಟ ಬಳಿಕ ಮತ್ತೆ ಐಪಿಎಲ್ ಪುನರಾರಂಭವಾಗುತ್ತಿದ್ದು. ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ(RCB) ಮತ್ತು ಕೆಕೆಆರ್​(KKR) ತಂಡಗಳು ಮುಖಾಮುಖಿಯಾಗುತ್ತಿವೆ. ಇದರ ನಡುವೆ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್​ ಇರಲಿದ್ದು. ಕೆಲವು ಸ್ಥಳಗಳಲ್ಲಿ ಮಾತ್ರ ಪಾರ್ಕಿಂಗ್​ಗೆ ಅವಕಾಶ ಒದಗಿಸಲಾಗಿದೆ.

ಇದನ್ನೂ ಓದಿ :ಮುಂಬೈ ವಿಮಾನ ನಿಲ್ದಾಣದಲ್ಲಿ ಐಸಿಸ್ ಉಗ್ರರನ್ನು ಬಂಧಿಸಿದ NIA

ಆಪರೇಷನ್​ ಸಿಂಧೂರ್​ ನಂತರ ಭಾರತ-ಪಾಕ್​ ನಡುವಿನ ಉದ್ವಿಗ್ನತೆಯಿಂದಾಗಿ ಮೇ 8ರಂದು ಐಪಿಎಲ್​ ಸ್ಥಗಿತಗೊಳಿಸಲಾಗಿತ್ತು. ಇದೀಗ ಇಂದಿನಿಂದ(ಮೇ.7) ಮತ್ತೆ ಐಪಿಎಲ್​ ಪುನರಾರಂಭವಾಗುತ್ತಿದ್ದು.

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ (RCB) ಹಾಗೂ ಕೆಕೆಆರ್ (KKR) ತಂಡಗಳು ಮುಖಾ ಮುಖಿಯಾಗಲಿವೆ. ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರಿ ಪೊಲೀಸರು ಅಲರ್ಟ್ ಘೋಷಿಸಿದ್ದು, ಟ್ರಾಫಿಕ್ ತಡೆಗಟ್ಟಲು ಹಲವು ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಸುಗಮ ಸಂಚಾರಕ್ಕಾಗಿ ವ್ಯವಸ್ಥೆ ಮಾಡಿದ್ದು, ಮೇ.17ರ ಮಧ್ಯಾಹ್ನ 3ರಿಂದ ರಾತ್ರಿ 11ರವರೆಗೂ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದೆ.

ಇದನ್ನೂ ಓದಿ :ಸಿಗರೇಟ್​ ವಿಚಾರಕ್ಕೆ ಜಗಳ: ಕಾರು ಗುದ್ದಿಸಿ ಟೆಕ್ಕಿ ಕೊ*ಲೆ..!

ಎಲ್ಲೆಲ್ಲಿ ವಾಹನಗಳ ನಿಲುಗಡೆ ನಿಷೇಧ?

1. ಕ್ವೀನ್ಸ್ ರಸ್ತೆ- ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ
2. ಎಂ.ಜಿ ರಸ್ತೆ- ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ
3. ಲಿಂಕ್ ರಸ್ತೆ- ಎಂ.ಜಿ ರಸ್ತೆಯಿಂದ ಕಬ್ಬನ್ ಪಾರ್ಕ್ ರಸ್ತೆವರೆಗೆ
4. ರಾಜಭವನ ರಸ್ತೆ- ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ
5. ಸೆಂಟ್ರಲ್ ಸ್ಟ್ರಿಟ್ ರಸ್ತೆಯ ಎರಡೂ ಕಡೆ
6. ಕಬ್ಬನ್ ರಸ್ತೆ- ಸಿ.ಟಿ.ಓ. ವೃತ್ತದಿಂದ ಡಿಕೆನ್ ಸನ್ ರಸ್ತೆ ಜಂಕ್ಷನ್‌ನ ರಸ್ತೆಯ ಎರಡೂ ಕಡೆ
7. ಸೆಂಟ್ ಮಾರ್ಕ್ಸ್ ರಸ್ತೆ- ಕ್ಯಾಶ್ ಫಾರ್ಮಸಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ
8. ಮ್ಯೂಸಿಯಂ ರಸ್ತೆ-,ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆ ವರೆಗೆ ಹಾಗೂ ಆಶಿರ್ವಾದಂ ವೃತ್ತದವರೆಗೆ
9. ಕಸ್ತೂರಬಾ ರಸ್ತೆ- ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ
10. ಮಲ್ಯ ಆಸ್ಪತ್ರೆ ರಸ್ತೆ- ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ.
11. ಕಬ್ಬನ್‌ಪಾರ್ಕ್ ಒಳಭಾಗ- ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ
11. ಲ್ಯಾವೆಲ್ಲಿ ರಸ್ತೆ- ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ವರೆಗೆ
12. ವಿಠಲ್ ಮಲ್ಯ ರಸ್ತೆ- ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್‌ಕಾಟನ್ ಬಾಲಕಿಯರ ಶಾಲೆಯವರೆಗೆ

ಪಾರ್ಕಿಂಗ್ ವ್ಯವಸ್ಥೆ

1. ಪಂದ್ಯ ವೀಕ್ಷಣೆ ಮಾಡಲು ಬರೋರಿಗೆ ಸೆಂಟ್ ಜೋಸೆಫ್ ಹೈಸ್ಕೂಲ್ ಗ್ರೌಂಡ್, ಯು.ಬಿ.ಸಿಟಿ ನಿಲುಗಡೆ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ
2. ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ಪಾರ್ಕಿಂಗ್
3. ಕೆ.ಎಸ್.ಸಿ.ಎ. ಸದಸ್ಯರ ವಾಹನಗಳಿಗೆ ಸೆಂಟ್ ಜೋಸೆಫ್ ಬಾಲಕರ ಶಾಲೆ ಮೈದಾನ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments