Saturday, August 23, 2025
Google search engine
HomeUncategorizedಕನ್ನಡ ಮಾತನಾಡಲ್ಲ ಎಂದು SBI ಬ್ಯಾಂಕ್​ ಸಿಬ್ಬಂದಿ ಧಿಮಾಕು: ಟ್ವಿಟ್​ ಮಾಡಿ ಸಿಎಂ ಆಕ್ರೋಶ

ಕನ್ನಡ ಮಾತನಾಡಲ್ಲ ಎಂದು SBI ಬ್ಯಾಂಕ್​ ಸಿಬ್ಬಂದಿ ಧಿಮಾಕು: ಟ್ವಿಟ್​ ಮಾಡಿ ಸಿಎಂ ಆಕ್ರೋಶ

ಬೆಂಗಳೂರು: ಚಂದಾಪುರ ಎಸ್‌ಬಿಐ ಬ್ಯಾಂಕ್‌ ಸಿಬ್ಬಂದಿಯೊಬ್ಬರು ಕನ್ನಡ ಮಾತನಾಡುವುದಿಲ್ಲ ಎಂದು ಧಿಮಾಕು ತೋರಿಸಿದ್ದ ಪ್ರಕರಣದ ಬಗ್ಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಕುರಿತು ಟ್ವಿಟ್​ ಮಾಡಿರುವ ಎಸ್​ಬಿಐ ಬ್ಯಾಂಕ್​ “ಗ್ರಾಹಕರ ಮೇಲೆ ಪ್ರತಿಕೂಲ ಪರಿಣಾಮ ಬೀರುವ ವಿಷಯದಲ್ಲಿ ಎಸ್​ಬಿಐ ಶೂನ್ಯ ಸಹಿಷ್ಣುತೆ ಹೊಂದಿದೆ ಎಂದು ಹೇಳಿದೆ.

ಚಂದಾಪುರದ ಎಸ್‌ಬಿಐ ಬ್ಯಾಂಕ್‌ಗೆ ಕೆಲಸದ ನಿಮಿತ್ತ ಗ್ರಾಹಕ ಹೋದಾಗ ಕನ್ನಡ ಮಾತನಾಡುವಂತೆ ಕೇಳಿದ್ದಾರೆ. ಆದರೆ ಕನ್ನಡ ಮಾತನಾಡಲು ಒಪ್ಪದ ಮಹಿಳಾ ಮ್ಯಾನೇಜರ್ ಗ್ರಾಹಕನಿಗೆ ಹಿಂದಿಯಲ್ಲಿ ಮಾತನಾಡುವಂತೆ ಅವಾಜ್‌ ಹಾಕಿದ್ದು, ಇದು ಭಾರತ ಬರೀ ಕರ್ನಾಟಕ ಮಾತ್ರ ಅಲ್ಲ. ನಾನು ಯಾವತ್ತೂ ಕನ್ನಡವನ್ನೇ ಮಾತಾಡಲ್ಲ. ಏನೇ ಆದರೂ ಅಂತ ಹೇಳುವ ಮ‌ೂಲಕ ಕರ್ನಾಟಕದಲ್ಲಿ ಮತ್ತೆ ಕನ್ನಡಿಗರನ್ನ ಕೆರಳಿಸುವಂತ ಹೇಳಿಕೆ ಕೊಟ್ಟು, ಕೆಂಗಣ್ಣಿಗೆ ಗುರಿಯಾಗಿದ್ದರು, ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ :ಕನ್ನಡದ ಸಾಹಿತಿ ಬಾನು ಮುಷ್ತಾಕ್​ ಅವರ ಕೃತಿಗೆ ಪ್ರತಿಷ್ಠಿತ ‘ಬೂಕರ್’​ ಪ್ರಶಸ್ತಿ

ಟ್ವಿಟ್​ ಮಾಡಿ ಕಳವಳ ವ್ಯಕ್ತಪಡಿಸಿದ ಎಸ್​ಬಿಐ ಬ್ಯಾಂಕ್​..!

ಘಟನೆ ಬಗ್ಗೆ ಎಸ್​ಬಿಐ ಬ್ಯಾಂಕ್​ ಅಧಿಕೃತವಾಗಿ ಟ್ವಿಟ್ ಮಾಡಿ ಕಳವಳ ವ್ಯಕ್ತಪಡಿಸಿದ್ದು. “ದಕ್ಷಿಣ ಬೆಂಗಳೂರಿನಲ್ಲಿರುವ ನಮ್ಮ ಸೂರ್ಯ ನಗರ ಶಾಖೆಯಲ್ಲಿ ಇತ್ತೀಚೆಗೆ ನಡೆದ ಘಟನೆಯ ಬಗ್ಗೆ ನಮಗೆ ತೀವ್ರ ಕಳವಳವಿದೆ. ಈ ವಿಷಯವು ಪ್ರಸ್ತುತ ಸಮಗ್ರ ಮೌಲ್ಯಮಾಪನದಲ್ಲಿದೆ. ನಮ್ಮ ಗ್ರಾಹಕರ ಭಾವನೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಯಾವುದೇ ನಡವಳಿಕೆಯ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶೂನ್ಯ ಸಹಿಷ್ಣುತಾ ನೀತಿಯನ್ನು ಕಾಯ್ದುಕೊಳ್ಳುತ್ತದೆ. ಎಲ್ಲಾ ನಾಗರಿಕರಿಗೆ ಗೌರವಾನ್ವಿತ ಮತ್ತು ಘನತೆಯ ನಡವಳಿಕೆಯನ್ನು ಖಚಿತಪಡಿಸಿಕೊಳ್ಳಲು ನಾವು ನಮ್ಮ ಬದ್ಧತೆಯಲ್ಲಿ ದೃಢವಾಗಿರುತ್ತೇವೆ ಎಂದು ಟ್ವಿಟ್ ಮಾಡಿದ್ದಾರೆ. ಇದನ್ನೂ ಓದಿ :ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಸಾರಿಗೆ ಬಸ್: ತಪ್ಪಿತು ಭಾರಿ ಅನಾಹುತ..!

ಘಟನೆ ಬಗ್ಗೆ ಸಿಎಂ ಆಕ್ರೋಶ..!

ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು “ಅನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿರುವ ಎಸ್‌ಬಿಐ ಶಾಖೆ ವ್ಯವಸ್ಥಾಪಕರ ವರ್ತನೆಯು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾತನಾಡಲು ನಿರಾಕರಿಸಿ ನಾಗರಿಕರ ಬಗ್ಗೆ ನಿರ್ಲಕ್ಷ್ಯ ತೋರಿರುವುದು ತೀವ್ರವಾಗಿ ಖಂಡನೀಯ. ಅಧಿಕಾರಿಯನ್ನು ವರ್ಗಾವಣೆ ಮಾಡುವಲ್ಲಿ ಎಸ್‌ಬಿಐನ ತ್ವರಿತ ಕ್ರಮವನ್ನು ನಾವು ಪ್ರಶಂಸಿಸುತ್ತೇವೆ. ಈ ವಿಷಯವನ್ನು ಈಗ ಮುಕ್ತಾಯಗೊಳಿಸಲಾಗಿದೆ ಎಂದು ಪರಿಗಣಿಸಬಹುದು.

ಆದಾಗ್ಯೂ, ಅಂತಹ ಘಟನೆಗಳು ಮರುಕಳಿಸಬಾರದು. ಎಲ್ಲಾ ಬ್ಯಾಂಕ್ ನೌಕರರು ಗ್ರಾಹಕರನ್ನು ಘನತೆಯಿಂದ ನಡೆಸಿಕೊಳ್ಳಬೇಕು ಮತ್ತು ಸ್ಥಳೀಯ ಭಾಷೆಯಲ್ಲಿ ಮಾತನಾಡಲು ಎಲ್ಲ ಪ್ರಯತ್ನಗಳನ್ನು ಮಾಡಬೇಕು ಎಂದು ನಾನು ಒತ್ತಾಯಿಸುತ್ತೇನೆ. ಇದನ್ನೂ ಓದಿ:ಗೃಹ ಸಚಿವ ಪರಮೇಶ್ವರ್ ಅವರ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ..!

ಫಿನ್‌ಮಿನ್‌ಇಂಡಿಯಾ & ಹಣಕಾಸು ಸೇವೆಗಳ ಇಲಾಖೆಯು ಭಾರತದಾದ್ಯಂತ ಎಲ್ಲಾ ಬ್ಯಾಂಕ್ ಸಿಬ್ಬಂದಿಗೆ ಸಾಂಸ್ಕೃತಿಕ ಮತ್ತು ಭಾಷಾ ಸಂವೇದನಾ ತರಬೇತಿಯನ್ನು ಕಡ್ಡಾಯಗೊಳಿಸಲಿದೆ. ಸ್ಥಳೀಯ ಭಾಷೆಯನ್ನು ಗೌರವಿಸುವುದು ಎಂದರೆ ಜನರನ್ನು ಗೌರವಿಸುವುದು ಎಂದು ಸಿಎಂ ಟ್ವಿಟ್ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments