ಮಂಡ್ಯ: ಟ್ರಾಫಿಕ್ ಪೊಲೀಸರ ಯಡವಟ್ಟಿಗೆ 3 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ವರದಿಯಾಗಿದೆ. ಮೃತ ಮಗುವನ್ನು ರಿತೀಕ್ಷಾ ಎಂದು ಗುರುತಿಸಿದ್ದು, ಸ್ಥಳದಲ್ಲಿ ಸಾರ್ವಜನಿಕರು ಪೊಲೀಸರ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ.
ಮಂಡ್ಯದ ಸ್ವರ್ಣಸಂದ್ರದ ಬಳಿ ಘಟನೆ ನಡೆದಿದ್ದು. ಮಂಡ್ಯದ ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ರಿತೀಕ್ಷ ತನ್ನ ತಂದೆ-ತಾಯಿಯ ಜೊತೆ ಬೈಕ್ನಲ್ಲಿ ತೆರಳುತ್ತಿದ್ದನು. ಈ ವೇಳೆ ಸ್ವರ್ಣಸಂದ್ರದ ಬಳಿ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬೈಕ್ನ್ನು ಅಡ್ಡಗಟ್ಟಲು ಯತ್ನಿಸಿದ್ದಾರೆ. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ರಿತೀಕ್ಷ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ :ಭೀಕರ ರಸ್ತೆ ಅಪಘಾತ; ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾ*ವು
ಬೈಕ್ನಿಂದ ಕೆಳಗೆ ಬಿದ್ದ ರಿತೀಕ್ಷ ತಲೆಗೆ ತೀವ್ರ ಗಾಯವಾಗಿದ್ದು. ತೀವ್ರ ರಕ್ತ ಸ್ರಾವದಿಂದ ಕಂದಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು ಘಟನಾ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಪೊಲೀಸರ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಮಗುವನ್ನು ಕಳೆದುಕೊಂಡ ಪೋಷಕರು ಪೊಲೀಸರಿಗೆ ಹಿಡಿಶಾಪ ಹಾಕುತ್ತಿದ್ದು. ಮಂಡ್ಯದ ಮಿಮ್ಸ್ ಆಸ್ಪತ್ರೆ ಮುಂಭಾಗ ಮಗುವಿನ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ :ತಿರಂಗ ಯಾತ್ರೆ ವೇಳೆ ಶಾಸಕ ಪ್ರಭು ಚೌಹಾಣ್ ತೀವ್ರ ಅಸ್ವಸ್ಥ: ಆಸ್ಪತ್ರೆಗೆ ದಾಖಲು