ಬೆಂಗಳೂರು: ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ದ ಎಫ್ಐಆರ್ ದಾಖಲಾಗಿದ್ದು. ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸಿದ ಆರೋಪದ COPTA ಕಾಯ್ದೆ ಅಡಿಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಕಸ್ತೂರ್ ಬಾ ರಸ್ತೆಯಲ್ಲಿರುವ ‘ದ ಒನ್ 8 ಕಮ್ಯೂನ್’ ಪಬ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ನಿಯಂತ್ರಣ) ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಪಹಲ್ಗಾಂನಲ್ಲಿ ಬಲಿಯಾದ ಶುಭಂ ದ್ವಿವೇದಿ ಕುಟುಂಬವನ್ನ ಭೇಟಿಯಾದ ಪ್ರಧಾನಿ ಮೋದಿ
ಧೂಮಪಾನಕ್ಕೆ ಪ್ರತ್ಯೇಕ ಅವಕಾಶ ನೀಡದಿದಕ್ಕೆ ಬಾರ್ ಆ್ಯಂಡ್ ರೆಸ್ಟೋರೆಂಟ್ನ ಮ್ಯಾನೇಜರ್ ಮತ್ತು ಸಿಬ್ಬಂದಿ ವಿರುದ್ದ ಪ್ರಕರಣ ದಾಖಲಾಗಿದೆ. ಮೇ. 29ರಂದು ಪೊಲೀಸರು ಬಾರ್ ಮೇಲೆ ದಾಳಿ ನಡೆಸಿದಾಗ ಈ ವಿಷಯ ಬೆಳಕಿಗೆ ಬಂದಿದ್ದು. ಪೊಲೀಸರು ಪಬ್ ವಿರುದ್ದ ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ. ನ್ಯಾಯಾಲಯದಿಂದ ಅನುಮತಿ ಪಡೆದು ಇದೀಗ ಕೇಸ್ ದಾಖಲಿಸಲಾಗಿದೆ. ಇದನ್ನೂ ಓದಿ: ಅಮೆರಿಕದ ಪ್ಲೋರಿಡಾದಲ್ಲಿ 8ನೇ ನಾವಿಕ ವಿಶ್ವ ಕನ್ನಡ ಸಮಾವೇಶ
ಅವಧಿ ಮೀರಿ ಪಬ್ ನಡೆಸುತ್ತಿದ್ದ ಆರೋಪದಲ್ಲಿ ಈ ಹಿಂದೆ ಕೂಡ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಕೇಸ್ ದಾಖಲಾಗಿತ್ತು. 2024ರ ಜುಲೈನಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈಗ ಮತ್ತೆ ಸ್ವಯಂಪ್ರೇರಿತವಾಗಿ ಎಫ್ಐಆರ್ ದಾಖಲಿಸಿದ್ದಾರೆ.