ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿರುವ ಕಾಲ್ತುಳಿತದ ಬಗ್ಗೆ ಕರ್ನಾಟಕ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದ್ದು. ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚನೆ ನೀಡಿದೆ.
ಆರ್ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ಸಂದರ್ಭ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ದೇಶವನ್ನೇ ಬೆಚ್ಚಿಬೀಳಿಸಿದ್ದು. ಘಟನೆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ :ಸರ್ಕಾರ, ಪೊಲೀಸರು, KSCA; ಹನ್ನೊಂದು ಜನರ ಸಾವಿಗೆ ಕಾರಣವಾಯ್ತು ಈ ಮೂರು ಕಾರಣಗಳು
ಆದರೆ ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಕೊಂಡಿದ್ದು. ಘಟನೆ ಬಗ್ಗೆ ವರದಿ ಸಲ್ಲಿಸಲು ಸೂಚನೆ ನೀಡಿದೆ. ಮಧ್ಯಹ್ನ 2:30ಕ್ಕೆ ವಿಚಾರಣೆಯನ್ನ ನಿಗಧಿ ಪಡಿಸಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ದಯಾನಂದ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ :ಸಂಭ್ರಮಚರಣೆ ವೇಳೆ ಕಾಲ್ತುಳಿತ; ಮೆಟ್ರೋ ನಿಲ್ದಾಣಕ್ಕೆ ನುಗ್ಗಿದ ಅಭಿಮಾನಿಗಳು, ಸಂಚಾರದಲ್ಲಿ ವ್ಯತ್ಯಯ