ತುಮಕೂರು: ಕಂಟೈನರ್ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದ್ದು. ನೈಟ್ ಶಿಫ್ಟ್ ಕೆಲಸ ಮುಗಿಸಿ ರೂಮಿಗೆ ತೆರಳುತ್ತಿದ್ದ ಮೂವರು ಚಿರನಿದ್ರೆಗೆ ಜಾರಿದ್ದಾರೆ. ಇದನ್ನೂ ಓದಿ :ಕಾಲ್ತುಳಿತ ಪ್ರಕರಣ; ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿದಂತೆ ನಾಲ್ವರನ್ನು ಬಂಧಿಸಿದ ಪೊಲೀಸರು
ತುಮಕೂರಿನ ನಂಧಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಂ.48ರಲ್ಲಿ ಘಟನೆ ನಡೆದಿದ್ದು. ಮೃತ ರಾಜೇಶ್, ಧನಂಜಯ್ ಮತ್ತು ಧನುಷ್ ಮೂವರು ನೈಟ್ ಶಿಫ್ಟ್ ಕೆಲಸ ಮುಗಿಸಿ ಉಪ್ಪಾರಹಳ್ಳಿಯಲ್ಲಿರುವ ರೂಮಿನ ಕಡೆಗೆ ತೆರಳುತ್ತಿದ್ದರು. ಈ ವೇಳೆ ಪೆಟ್ರೋಲ್ ಬಂಕ್ನಿಂದ ಹೊರಬಂದ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿದ್ದು. ಬೈಕ್ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ :ಉತ್ತರಾಖಂಡ್; ಸ್ವಂತ ಮಗಳ ಮೇಲೆ ಬಾಯ್ಫ್ರೆಂಡ್ನಿಂದ ಅತ್ಯಾಚಾರ ಮಾಡಿಸಿದ ತಾಯಿ..!
ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ. ಘಟನ ಸ್ಥಳಕ್ಕೆ SP ಅಶೋಕ್ ಕೆ.ವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


