ಕೌಟುಂಬಿಕ ಕಲಹದ ಶಂಕೆ; ಇಬ್ಬರು ಮಕ್ಕಳನ್ನ ಕೆರೆಗೆ ಎಸೆದು ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹಕ್ಕೆ ಬೇಸತ್ತ ಗೃಹಿಣಿಯೊಬ್ಬರು, ತನ್ನ ಇಬ್ಬರು ಹೆಣ್ಣು ಮಕ್ಕಳನ್ನ ಕೆರೆಗೆ ಎಸೆದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ, ಬೋದಗಾನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು. ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿ ತನ್ನ ಇಬ್ಬರು ಹೆಣ್ಣು ಮಕ್ಕಳನ್ನ ರಂಗಧಾಮ ಕೆರೆಗೆ ತಳ್ಳಿ, ನಂತರ ತಾವೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು 30 ವರ್ಷದ ಲಾವಣ್ಯ ಮತ್ತು ಮಕ್ಕಳಾದ ನಿಹಾರಿಕಾ(9) ಹಾಗೂ ನೇಹಾ (6) ಎಂದು ಗುರುತಿಸಲಾಗಿದೆ. ಇದನ್ನೂ ಓದಿ :3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಪೊಲೀಸ್​ ಎನ್​ಕೌಂಟರ್​ನಲ್ಲಿ ಸಾವು

ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ಇನ್ನಷ್ಟೇ ತಿಳಿಯಬೇಕಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ :ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮೋದಿ; ಕಾಶ್ಮೀರದಲ್ಲಿ ರಾರಾಜಿಸಿ ತಿರಂಗ

RELATED ARTICLES

Related Articles

TRENDING ARTICLES