Sunday, September 14, 2025
HomeUncategorizedಅಯೋಧ್ಯೆಗೆ ಹೊರಟ ಕೃಷ್ಣನೂರಿನ ಪವಿತ್ರ ಮೃತ್ತಿಕೆಗಳು..!

ಅಯೋಧ್ಯೆಗೆ ಹೊರಟ ಕೃಷ್ಣನೂರಿನ ಪವಿತ್ರ ಮೃತ್ತಿಕೆಗಳು..!

ಉಡುಪಿ : ಜಗತ್ತಿನ ಕೋಟ್ಯಂತರ ಹಿಂದುಗಳ ಶತಕಗಳ ಕನಸು ಸಾಕಾರಗೊಂಡು, ಶ್ರೀ ರಾಮನ ಜನ್ಮಭೂವಿಯಲ್ಲಿಯೇ ಮಂದಿರ ನಿರ್ಮಾಣವಾಗಲಿದೆ. ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ಭವ್ಯ ಶ್ರೀ ರಾಮ ಮಂದಿರದ ಭೂಗರ್ಭ ಸೇರಲು ಶ್ರೀಕೃಷ್ಣ ನಗರಿ ಉಡುಪಿಯಿಂದ ಪವಿತ್ರವಾದ ಮೃತ್ತಿಕೆಯನ್ನು ರವಾನಿಸಲಾಯಿತು. ಅಯೋಧ್ಯೆಯ ಸಂಕಲ್ಪಿತ ಮಂದಿರದ ತಳಭಾಗಕ್ಕೆ ದೇಶದ ನೂರಾರು ನದಿಗಳು , ಅನೇಕ ಪುಣ್ಯ ಕ್ಷೇತ್ರಗಳ ಪವಿತ್ರ ಮೃತ್ತಿಕೆಯನ್ನು ಸೇರಿಸಲು ವಿಶ್ವಹಿಂದು ಪರಿಷತ್ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಕೃಷ್ಣ ನಗರಿ ಉಡುಪಿಯ ಪವಿತ್ರ ಮಣ್ಣಿಗೆ ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಶ್ರೀ ಕೃಷ್ಣನ ಗಂಧ ಪ್ರಸಾದ, ನಿರ್ಮಾಲ್ಯವಿಟ್ಟು ಮಂಗಳಾರತಿ ಬೆಳಗಿ ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ಅತ್ಯಂತ ಯಶಸ್ವಿಯಾಗಿ ನಡೆದು ಲೋಕಕಲ್ಯಾಣವಾಗಲಿ ಎಂದು ಪ್ರಾರ್ಥಿಸಿ ವಿಹಿಂಪದ ಉಡುಪಿಯ ಪ್ರಮುಖರಿಗೆ ಮೃತ್ತಿಕೆ ಹಸ್ತಾಂತರಿಸಿದರು. ಈ ಸಂದರ್ಭ ವಿಹಿಂಪ‌ ಜಿಲ್ಲಾಧ್ಯಕ್ಷ ಪಿ ವಿಷ್ಣುಮೂರ್ತಿ ಆಚಾರ್ಯ , ಕಾರ್ಯದರ್ಶಿ ದಿನೇಶ್ ಮೆಂಡನ್ ಬಜರಂಗದಳ ಪ್ರಾಂತ ಸಹಸಂಚಾಲಕ ಸುನಿಲ್ ಕೆ ಆರ್, ಮಠದ ವ್ಯವಸ್ಥಾಪಕ ಗೋವಿಂದರಾಜ್, ವಿದ್ವಾನ್ ರಾಮನಾಥ ಆಚಾರ್ಯ, ವಾಸುದೇವ ಭಟ್ ಪೆರಂಪಳ್ಳಿ ಮೊದಲಾದವರು ಉಪಸ್ಥಿತರಿದ್ದರು. ಸ್ವಾಮೀಜಿಯವರಿಂದ ಮೃತ್ತಿಕೆಯನ್ನು ಸ್ವೀಕರಿಸಿದ ಬಳಿಕ ಕಾರ್ಯಕರ್ತರು ರಥಬೀದಿಯಲ್ಲಿ ರಾಮನಾಮ ಸ್ಮರಣೆಯೊಂದಿಗೆ ಪ್ರದಕ್ಷಿಣೆ ಬಂದು ಶ್ರೀ ಮದನಂತೇಶ್ವರ ದೇವಳಕ್ಕೆ ತೆರಳಿ ಅಲ್ಲಿ ಶ್ರೀ ದೇವರ ಪ್ರಸಾದವನ್ನೂ ಸೇರಿಸಿ , ಅರ್ಚಕರ ಮೂಲಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಹಿತ್ತಾಳೆಯ ಕರಂಡಕದಲ್ಲಿ ಮೃತ್ತಿಕೆಯನ್ನು ತುಂಬಿಸಿ ಕಳಿಸಿಕೊಟ್ಟರು. ಉಡುಪಿ ಮಾತ್ರವಲ್ಲದೆ ದಕ್ಷಿಣ ಭಾರತದ ಅನೇಕ ಕ್ಷೇತ್ರಗಳ ಹಾಗೂ ನದಿಗಳ ಮೃತ್ತಿಕೆಯನ್ನು ಸಂಗ್ರಹಿಸಲಾಗುತ್ತಿದೆ. ಇವೆಲ್ಲವನ್ನೂ ಆಗಸ್ಟ್ 5 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವ ಸಂದರ್ಭದಲ್ಲಿ ಮಂದಿರದ ಜಾಗದಲ್ಲಿ ಭೂಮಿಗೆ ಅರ್ಪಿಸಲಿದ್ದಾರೆ. ಆದರೆ ಚಾತುರ್ಮಾಸ್ಯ ವ್ರತದ ಹಿನ್ನೆಲೆಯಲ್ಲಿರು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ನ ಸದಸ್ಯರಾದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಶ್ರೀಗಳು ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ನಡೆಯಲಿರುವ ಶಿಲಾನ್ಯಾಸ ಸಮಾರಂಭದಲ್ಲಿ ಅನುಪಸ್ಥಿತರಾಗಲಿದ್ದಾರೆ ಎಂದು ಮಠದ ಪ್ರಕರಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments