Wednesday, August 27, 2025
HomeUncategorizedಬೆಂಗಳೂರು ಗಲಭೆ NIA ಗೆ ವಹಿಸಲು VHP ಆಗ್ರಹ

ಬೆಂಗಳೂರು ಗಲಭೆ NIA ಗೆ ವಹಿಸಲು VHP ಆಗ್ರಹ

ಮಂಗಳೂರು : ಬೆಂಗಳೂರು ಗಲಭೆ ಪ್ರಕರಣದ ತನಿಖೆಯನ್ನ ರಾಷ್ಟ್ರೀಯ ತನಿಖಾ ದಳದ (NIA) ಮೂಲಕ ನಡೆಸುವಂತೆ ವಿಶ್ವ ಹಿಂದೂ ಪರಿಷತ್ ಒತ್ತಾಯಿಸಿದೆ. ಮಂಗಳೂರಿನಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭೇಟಿಯಾದ VHP ನಾಯಕರು, ಘಟನೆಯನ್ನ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕಿದ್ದು, ಮಾತ್ರವಲ್ಲದೇ ರಾಜ್ಯದಲ್ಲಿ SDPI ಪಕ್ಷವನ್ನ ನಿಷೇಧಿಸಬೇಕೆಂದು ಅವರು ಒತ್ತಾಯಿಸಿದರು. ಅಲ್ಲದೇ, ಘಟನೆ ಹಿಂದೆ ಭಯೋತ್ಪಾದಕ ಸಂಘಟನೆಗಳ ಕೈವಾಡವಿರುವ ಶಂಕೆ ಇದ್ದು ಪ್ರಕರಣವನ್ನ NIA ಮೂಲಕ ತನಿಖೆ ನಡೆಸುವಂತೆ ಗೃಹ ಸಚಿವರಲ್ಲಿ ಮನವಿ ಮಾಡಿಕೊಂಡರು. ಈ ಸಂದರ್ಭ ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ಹಾಗೂ ಶರಣ್ ಪಂಪ್ವೆಲ್ ಮತ್ತಿತರು ಉಪಸ್ಥಿತರಿದ್ದರು.

ಇರ್ಷಾದ್ ಕಿನ್ನಿಗೋಳಿ
ಪವರ್ ಟಿವಿ, ಮಂಗಳೂರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments