ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್-19 ಅಬ್ಬರಿಸತೊಡಗಿದ್ದು, ಸೋಂಕಿತರ ಸಂಖ್ಯೆ ಇದೀಗ 5 ಸಾವಿರ ಗಡಿ ದಾಟಿ ಮುನ್ನುಗ್ಗಿದೆ. ಜಿಲ್ಲೆಯಲ್ಲಿ ಬುಧವಾರ 291 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಆದರೆ, ಸೋಂಕಿನಿಂದ ಗುಣಮುಖವಾದವರು ಕೇವಲ 72. ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೂ ಒಟ್ಟು 45,725 ಮಂದಿಯ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 5057 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಇವರಲ್ಲಿ ಈಗಾಗಲೇ 2950 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು 2,026 ಸಕ್ರಿಯ ಪ್ರಕರಣಗಳಿವೆ. ಅದರಲ್ಲಿ 237 ಮಂದಿ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದಂತೆ 975 ಮಂದಿ ಕೋವಿಡ್ ಆರೈಕೆ ಕೇಂದ್ರದಲ್ಲಿ, 247 ಮಂದಿ ಖಾಸಗಿ ಆಸ್ಪತ್ರೆಯಲ್ಲಿ, 439 ಮಂದಿ ಮನೆಯಲ್ಲಿಯೇ ಐಸೋಲೇಶನ್ಗೆ ಒಳಗಾಗಿದ್ದಾರೆ. 128 ಮಂದಿ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಪತ್ತೆಯಾದ ಪ್ರಕರಣಗಳಲ್ಲಿ ಶಿವಮೊಗ್ಗ- 158, ಭದ್ರಾವತಿ-56, ಶಿಕಾರಿಪುರ- 27, ತೀರ್ಥಹಳ್ಳಿ- 6, ಹೊಸನಗರ -1, ಸೊರಬ -18, ಸಾಗರ 13 ಹಾಗೂ ಹೊರ ಜಿಲ್ಲೆಯಿಂದ ಶಿವಮೊಗ್ಗಕ್ಕೆ ಬಂದಿದ್ದ 12 ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದೆ. ಇನ್ನು ಜಿಲ್ಲೆಯಲ್ಲಿ ಚಿಕಿತ್ಸೆ ಫಲಿಸದೆ ಬುಧವಾರ ಇಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 81ಕ್ಕೆ ಹೆಚ್ಚಳವಾಗಿದೆ. 1,939 ಕಂಟೈನ್ಮೆಂಟ್ ವಲಯಗಳಿವೆ. 682 ಡೀನೋಟಿಫೈಡ್ ಕಂಟೈನ್ಮೆಂಟ್ ಜೋನ್ ಗುರುತಿಸಲಾಗಿದೆ.
ಶಿವಮೊಗ್ಗದಲ್ಲಿ 5 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ
RELATED ARTICLES