ತುಮಕೂರು : ಜಿಲ್ಲೆಯ ತಿಪಟೂರು ತಾಲ್ಲೂಕಿನ ಹರಚನಹಳ್ಳಿ ಗ್ರಾಮದ ರವಿ ಮತ್ತು ಗೀತಾ ರವರ ಪುತ್ರಿ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರವೀಣ್ ಎಂಬಾತನು ಕರೆದುಕೊಂಡು ಹೋಗಿದ್ದು ಈ ಬಗ್ಗೆ ಬಡ ಕುಟುಂಬ ದೂರು ನೀಡಲು ಹೋದರೆ ತಿಪಟೂರು ಪೊಲೀಸ್ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ. ಮೂಲತಃ ಚಿತ್ರದುರ್ಗ ಜಿಲ್ಲೆಯ ಬಡಕುಟುಂಬದವರಾಗಿದ್ದು ಕೂಲಿ ಕೆಲಸಕ್ಕಾಗಿ ಹರಚನಹಳ್ಳಿಗೆ ಬಂದು ಕೆಲಸ ನಿರ್ವಹಿಸುತ್ತಿದ್ದರು, ಈ ವೇಳೆ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಎಂಬಾತ ಮಗಳನ್ನು ಕರೆದುಕೊಂಡು ಹೋಗಿದ್ದು ಮಗಳನ್ನು ಹುಡುಕಿಕೊಡಿ ಎಂದು ಅಂಗಲಾಚಿದರೂ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಪೊಲೀಸರ ವಿರುದ್ಧ ಬಾಲಕಿಯ ಪೋಷಕರು ಆರೋಪ ಮಾಡಿದ್ದಾರೆ. ಇನ್ನೂ ತುಮಕೂರು ಜಿಲ್ಲೆ ಕಾನೂನು ಸಚಿವರ ಜಿಲ್ಲೆಯಾಗಿದ್ದು ಬಡವರು ನ್ಯಾಯಕ್ಕಾಗಿ ಪರದಾಡುತ್ತಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದೆ.
ಹೇಮಂತ್ ಕುಮಾರ್. ಜೆ.ಎಸ್ ಪವರ್ ಟಿವಿ ತುಮಕೂರು.