ಬಿಜೆಪಿ ಸೇರುವ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿಲ್ಲ: ಎನ್ ಮಹೆಶ್

ಚಾಮರಾಜನಗರ: ಬಿಜೆಪಿ ಸೇರುವ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಕೊಳ್ಳೇಗಾಲ ಶಾಸಕ ಎನ್ ಮಹೆಶ್ ಚಾಮರಾಜನಗರದಲ್ಲಿ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಸಮಾವೇಶದಲ್ಲಿ ಅಭಿಮಾನದಿಂದ ಭಾವಚಿತ್ರವನ್ನು ಬಳಕೆ ಮಾಡಿಕೊಂಡಿದ್ದಾರೆ.   ಮಂತ್ರಿ ಮಾಡೋದು, ಬಿಡೋದು ಅವರಿಗೆ ಬಿಟ್ಟ ವಿಚಾರ. ನನ್ನ ಬೆಂಬಲ ಯಾವತ್ತಿಗೂ ಸಿಎಂ ಯಡಿಯೂರಪ್ಪ ಅವರಿಗೆ ಇರುತ್ತದೆ ಎಂದರು. ನಾನು ಈಗ ಸ್ವತಂತ್ರ ಶಾಸಕ. ಬಹುಮತ ಸಾಬೀತು ವೇಳೆ ಗೈರಾಗಿದ್ದೆ. ಮೈತ್ರಿ ಸರ್ಕಾರ ಪತನದ ವೇಳೆ ಪಕ್ಷದ ಪರ-ವಿರೋಧವಾಗಿಯೂ ಮತ ಹಾಕಿಲ್ಲ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿದರೆ ಅದೇ ಸಿಹಿಸುದ್ದಿ ಎಂದು ಚಾಮರಾಜನಗರದಲ್ಲಿ ಕೊಳ್ಳೇಗಾಲ ಶಾಸಕ ಎನ್ ಮಹೇಶ್ ಹೇಳಿದ್ದಾರೆ.

RELATED ARTICLES

Related Articles

TRENDING ARTICLES