ಬೆಳಗಾವಿ : ಬೆಳಗಾವಿಯ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷದ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕನಕಪುರ ಬಂಡೆ ಪುಡಿಪುಡಿಯಾಗುತ್ತೆ, ಡಿ.ಕೆ.ಸುರೇಶ್ ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದಿದ್ದಾರೆ ಶೆಟ್ಟರ್.
ಡಿ.ಕೆ ಶಿವಕುಮಾರ್ ಸಿದ್ಧರಾಮಯ್ಯ ಮಧ್ಯೆ ಮುಸುಕಿನ ಗುದ್ದಾಟ ! ! !
ಬೆಳಗಾವಿಯಲ್ಲಿ ಡಿ.ಕೆ.ಬ್ರದರ್ಸ್ಗೆ ಸಚಿವ ಜಗದೀಶ್ ಶೆಟ್ಟರ್ ಸವಾಲು ಹಾಕಿ, ದೇಶದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತೆ ಎಂದು ಹೇಳಿದ್ದಾರೆ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ, ಇಲ್ಲವೆಂದರೆ ಕಾಂಗ್ರೆಸ್ ತಮ್ಮ ಸಿಎಂ ಅಭ್ಯರ್ಥಿ ಯಾರು ಎಂದು ಬಹಿರಂಗಪಡಿಸಲಿ ಎಂದು ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಜಗದೀಶ್ ಶೆಟ್ಟರ್ ವಾಗ್ದಾಳಿ ಮಾಡಿದ್ದಾರೆ