ಉದ್ಯೋಗ ಸೃಷ್ಟಿಯಲ್ಲಿ ಸರ್ಕಾರ ವಿಫಲ; ಕೇಂದ್ರಕ್ಕೆ ಖರ್ಗೆ ತರಾಟೆ

ನವದೆಹಲಿ: ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ದೇಶಾದ್ಯಂತ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಅವರು, ‘ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟದಲ್ಲಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ ಬಿಜೆಪಿ ಇದುವರೆಗೆ ಎಷ್ಟು ಮಂದಿಗೆ ಉದ್ಯೋಗದ ಭರವಸೆ ನೀಡಿದ್ದಾರೆ ಎಂದು ಪ್ರಶ್ನಿಸಿದರು.

ಅಂತೆಯೇ ಕೇಂದ್ರ ಸರ್ಕಾರದಲ್ಲಿ ಒಂಬತ್ತು ಲಕ್ಷ ಹುದ್ದೆಗಳು ಖಾಲಿ ಇವೆ. 2014ರಲ್ಲಿ ಬಿಜೆಪಿ ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿತ್ತು. ಇಷ್ಟೊತ್ತಿಗೆ 15 ಕೋಟಿ ಜನರಿಗೆ ಉದ್ಯೋಗ ನೀಡಬೇಕಿತ್ತು. ಆದರೆ ನಿಜವಾಗಿಯೂ ಬಿಜೆಪಿ ಎಷ್ಟು ಮಂದಿಗೆ ಉದ್ಯೋಗ ನೀಡಿದೆ? ಈ ಬಾರಿಯ ಬಜೆಟ್ ಮುಂದಿನ 5 ವರ್ಷಗಳಲ್ಲಿ ಕೇವಲ 60 ಲಕ್ಷ ಉದ್ಯೋಗಗಳ ಭರವಸೆ ನೀಡಿದೆ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.

RELATED ARTICLES

Related Articles

TRENDING ARTICLES