Sunday, September 7, 2025
HomeUncategorizedಎಸ್​ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಬಿ ಯಶೋವರ್ಮ ವಿಧಿವಶ

ಎಸ್​ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಬಿ ಯಶೋವರ್ಮ ವಿಧಿವಶ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ, ಪ್ರಸ್ತುತ ಎಸ್​ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದ ಡಾ. ಬಿ. ಯಶೋವರ್ಮ ಅವರು(66) ದೀರ್ಘಕಾಲದ ಅನಾರೋಗ್ಯದ ಹಿನ್ನೆಲೆ ನಿನ್ನೆ (ರವಿವಾರ) ವಿಧಿವಶರಾಗಿದ್ದಾರೆ.

ಡಾ. ಬಿ. ಯಶೋವರ್ಮ ಅವರು ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದ ಕಾರಣಕ್ಕಾಗಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಭಾನುವಾರ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧರಾಗಿದ್ದಾರೆ. ಈ ಕುರಿತಂತೆ ಶ್ರೀಖಾವಂದರು, ಧರ್ಮಸ್ಥಳ ಇನ್ನಷ್ಟೇ ಅಧಿಕೃತವಾಗಿ ಪ್ರಕಟಣೆ ನೀಡಬೇಕಿದೆ.

ಡಾ. ಬಿ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ ಡಾ. ಹೇಮಾವರಿ ಹೆಗ್ಗಡೆಯವರ ಸಹೋದರರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಬಂಧುವರ್ಗ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments