Thursday, August 28, 2025
HomeUncategorizedಶಾಸಕ ಜಿ ಟಿ ದೇವೇಗೌಡಗೆ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿ

ಶಾಸಕ ಜಿ ಟಿ ದೇವೇಗೌಡಗೆ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿ

ಮೈಸೂರು: ನಿಮ್ಮ ಮೊಮ್ಮಗಳು ಗೌರಿ ಅವರ ನಿಧನದ ಬಗ್ಗೆ ತಿಳಿದು ನನಗೆ ಆಘಾತವಾಗಿದೆ ಮತ್ತು ತೀವ್ರ ನೋವಾಗಿದೆ ಎಂದು ಶಾಸಕ ಜಿ ಟಿ ದೇವೇಗೌಡ ಮೊಮ್ಮಗಳು ವಿಧಿವಶ ಹಿನ್ನೆಲೆಯಲ್ಲಿ ಶಾಸಕ ಜಿ ಟಿ ದೇವೇಗೌಡರಿಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನ ಹೇಳಿದ್ದಾರೆ.

ನಿಮ್ಮ ಮೊಮ್ಮಗಳು ಗೌರಿ ಅವರ ನಿಧನದ ಬಗ್ಗೆ ತಿಳಿದು ನನಗೆ ಆಘಾತವಾಗಿದೆ ಮತ್ತು ತೀವ್ರ ನೋವಾಗಿದೆ. ಇಷ್ಟು ಇಳಿವಯಸ್ಸಿನಲ್ಲಿ ಆಕೆ ಇಹಲೋಕ ತ್ಯಜಿಸಿದ್ದಾಳೆ ಎಂದರೆ ನಂಬುವುದು ಅಸಾಧ್ಯ. ಇದು ತೀವ್ರ ದುಃಖದ ಈ ಸಮಯದಲ್ಲಿ ನನ್ನ ಹೃತ್ಪೂರ್ವಕ ಸಂತಾಪಗಳು ಅಂತಹ ಚಿಕ್ಕ ವಯಸ್ಸಿನಲ್ಲಿ ಮಗುವಿನ ನಷ್ಟವು ಪೋಷಕರಿಗೆ ಮತ್ತು ಅಜ್ಜನಾದ ನಿಮಗೆ ಅತ್ಯಂತ ಕಷ್ಟಕರ ಸಮಯವಾಗಿದೆ ಎಂದಿದ್ದಾರೆ.

ಅದಲ್ಲದೇ, ಗೌರಿ ಬಿಟ್ಟು ಹೋಗಿರುವ ನೆನಪುಗಳು ಕುಟುಂಬಕ್ಕೆ ಸಾಂತ್ವನ ನೀಡಲಿ. ಈ ತುಂಬಲಾರದ ನಷ್ಟವನ್ನು ಭರಿಸುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪತ್ರದ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಾಂತ್ವನ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments