Wednesday, September 3, 2025
HomeUncategorizedಚಡ್ಡಿ ಹಾಕಿರುವ RSS ಕಾರ್ಯಕರ್ತರಿಂದಲೇ ದೇಶ ಒಗ್ಗಾಟ್ಟಾಗಿದೆ : ಮಾಜಿ ಸಿಎಂ ಜಗದೀಶ್​ ಶೆಟ್ಟರ್

ಚಡ್ಡಿ ಹಾಕಿರುವ RSS ಕಾರ್ಯಕರ್ತರಿಂದಲೇ ದೇಶ ಒಗ್ಗಾಟ್ಟಾಗಿದೆ : ಮಾಜಿ ಸಿಎಂ ಜಗದೀಶ್​ ಶೆಟ್ಟರ್

ಹುಬ್ಬಳ್ಳಿ : ಸಿದ್ದರಾಮಯ್ಯ ಒಬ್ಬ ಮಾಜಿ ಸಿಎಂರಂತೆ ವರ್ತನೆ ಮಾಡೋದು ಬಿಟ್ಟು ಪುಂಡ, ಪೋಕರಿಗಳ, ಸಾಮಾನ್ಯ ಕಾರ್ಯಕರ್ತರಂತೆ ಮಾತನಾಡುತ್ತಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ಅತ್ಯಂತ ಕೆಳಮಟ್ಟದ ಹೇಳಿಕೆ ನೀಡುತ್ತಿದ್ದಾರೆ. ಐದು ವರ್ಷ ಸಿಎಂ ಆಗಿದ್ದವರ ಸಂಸ್ಕೃತಿ ಇದಲ್ಲ. ಚಡ್ಡಿ ಹಾಕಿರುವ ಆರ್ ಎಸ್ ಎಸ್ ಕಾರ್ಯಕರ್ತರಿಂದಲೇ ದೇಶ ಒಗ್ಗಾಟ್ಟಾಗಿದೆ, ದೇಶ ಉಳಿದಿದೆ. ಅವರು ಆರ್ ಎಸ್ ಎಸ್ ಬಗ್ಗೆ ಮಾತನಾಡಿ ಅಲ್ಪಸಂಖ್ಯಾತರ ಮತ ಪಡೆಯಬಹುದ ಎಂದುಕೊಂಡಿದ್ದಾರೆ. ಇದು ಸಿದ್ದರಾಮಯ್ಯಗೆ ತಿರುಗು ಬಾಣವಾಗುತ್ತೆ ಎಂದರು.

ಅದಲ್ಲದೇ, ಪದೇ ಪದೇ ಆರ್ ಎಸ್ ಎಸ್ ಬಗ್ಗೆ ಮಾತನಾಡಿದ್ರೆ ಸಿದ್ದರಾಮಯ್ಯಗೆ ಉಳಿಗಾಲವಿಲ್ಲ. ಈಗಾಗಲೇ ಕಾಂಗ್ರೆಸ್ ಪಕ್ಷ ಅವನತಿಯತ್ತ ಸಾಗಿದೆ. ಸಿದ್ದರಾಮಯ್ಯನವರು ಇದನ್ನು ಅರಿತು ಮಾತನಾಡಬೇಕು. ಪಶ್ಚಿಮ ಶಿಕ್ಷಕರ ವಿಧಾನ ಪರಿಷತ್ ಚುನಾವಣಾ ವಿಚಾರದಲ್ಲಿ ನಮ್ಮ ಅಭ್ಯರ್ಥಿ ಬಸವರಾಜ ಹೊರಟ್ಟಿ ಪರ ಪಕ್ಷದ ಗೆಲವು ನಿಶ್ಚಿತ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular

Recent Comments