Thursday, September 18, 2025
HomeUncategorizedಹಳ್ಳದ ನೀರಿನಲ್ಲಿ ತೇಲಿ ಬಂದ ಭ್ರೂಣಗಳು

ಹಳ್ಳದ ನೀರಿನಲ್ಲಿ ತೇಲಿ ಬಂದ ಭ್ರೂಣಗಳು

ಬೆಳಗಾವಿ: ಪಟ್ಟಣದಲ್ಲಿ ಇರುವ ಈ ಹಳ್ಳದಲ್ಲಿ ತೇಲಿ ಬಂದಿರುವುದು ಒಂದಲ್ಲ, ಎರಡಲ್ಲ‌, ಏಳು ಭ್ರೂಣಗಳು. ಭ್ರೂಣಗಳ ಪತ್ತೆ ಇಡೀ ಜಿಲ್ಲೆ ಜನರನ್ನೇ ಬೆಚ್ಚಿಬೀಳುವಂತೆ ಮಾಡಿದೆ‌. ಅಷ್ಟಕ್ಕೂ ಈ ಭ್ರೂಣಗಳ ಹತ್ಯೆಗೈದವರು ಯಾರು..? ಹಳ್ಳದಲ್ಲಿ ಎಸೆದವರು ಯಾರು..? ಎಂಬುದೇ ನಿಗೂಢ

ರಾಕ್ಷಸಿ ಕೃತ್ಯ ನಡೆದಿರುವುದು ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ. ಇಲ್ಲಿನ ಬಸ್ ನಿಲ್ದಾಣ ಸಮೀಪದ ಹಳ್ಳದಲ್ಲಿ 7 ಭ್ರೂಣಗಳು5 ಡಬ್ಬಗಳಲ್ಲಿ ಪತ್ತೆಯಾಗಿವೆ. ಇದನ್ನು ಗಮನಿಸಿದ ಸ್ಥಳೀಯರು ಮೂಡಲಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಭ್ರೂಣಗಳನ್ನು ಹಳ್ಳದಿಂದ ಹೊರತೆಗೆದು ಸ್ಥಳೀಯ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಸ್ಥಳೀಯ ಆರೋಗ್ಯಾಧಿಕಾರಿಗಳು, ಮೂಡಲಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ಥಳಕ್ಕೆ ಡಿಹೆಚ್‌ಒ ಡಾ.ಮಹೇಶ್ ಕೋಣಿ ದೌಡಾಯಿಸಿದ್ದಾರೆ.

ಪ್ರಕರಣ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಬೆಳಗಾವಿ ಡಿಹೆಚ್‌ಒ ಡಾ.ಮಹೇಶ್ ಕೋಣಿ, ಮೂಡಲಗಿ ಪಟ್ಟಣದ ಸೇತುವೆ ಕೆಳಗೆ 5 ಡಬ್ಬಿಯಲ್ಲಿ ಏಳು ಭ್ರೂಣಗಳು ಪತ್ತೆಯಾಗಿವೆ. ಸ್ಥಳೀಯ ಆರೋಗ್ಯಾಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿದ್ದೇವೆ. ಪಂಚಾಯಿತಿ ಕಡೆಯಿಂದ ಪೊಲೀಸರಿಗೆ ದೂರು ನೀಡಲಾಗುವುದು. ಭ್ರೂಣಗಳನ್ನು ಸ್ಥಳೀಯ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಕೇಸ್ ದಾಖಲಾದ ಬಳಿಕ ಅವುಗಳನ್ನು ಬೆಳಗಾವಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ತಂದು ಪರೀಕ್ಷೆ ನಡೆಸಲಾಗುವುದು. ಇದನ್ನ ಯಾರು ಮಾಡಿದ್ದಾರೆ, ಎಲ್ಲಿಂದ ಬಂದಿದ್ದು ಎಂಬ ಬಗ್ಗೆ ತನಿಖೆ ಮಾಡಲಾಗುವುದು ಎಂದಿದ್ದಾರೆ…

ಒಟ್ಟಾರೆಯಾಗಿ 7 ಭ್ರೂಣಲಿಂಗಳು ಪತ್ತೆಯಾದ ಸುದ್ದಿ ಹರಡುತ್ತಿದ್ದಂತೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಶಿಕ್ಷಾರ್ಹ ಅಪರಾಧ. ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಆರೋಪಿಗಳ ಪತ್ತೆಗೆ ಬಲೆ ಬೀಸಿದೆ.

ಕ್ಯಾಮರಾಮನ್ ರಾಹುಲ್‌ ಜೊತೆ ಅಣ್ಣಪ್ಪ ಬಾರ್ಕಿ ಪವರ್ ಟಿವಿ ಬೆಳಗಾವಿ

RELATED ARTICLES
- Advertisment -
Google search engine

Most Popular

Recent Comments