Tuesday, August 26, 2025
Google search engine
HomeUncategorizedನಾಳೆಯಿಂದ ಜುಲೈ ೪ವರೆಗೆ SSLC ಪೂರಕ ಪರೀಕ್ಷೆ

ನಾಳೆಯಿಂದ ಜುಲೈ ೪ವರೆಗೆ SSLC ಪೂರಕ ಪರೀಕ್ಷೆ

ಬೆಂಗಳೂರು : ನಾಳೆಯಿಂದ ಜುಲೈ ೪ವರೆಗೆ SSLC ಪೂರಕ ಪರೀಕ್ಷೆ ಇದ್ದು, ಈ ಬಾರಿ 94649 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಣಿ ಮಾಡಿದ್ದಾರೆ.

423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನ ಅಳವಡಿಕೆ ಮಾಡಿದ್ದಾರೆ. SSLC ಪೂರಕ ಪರೀಕ್ಷೆಯ ವೇಳಾಪಟ್ಟಿ ಜೂನ್ 27-ವಿಜ್ಞಾನ, ರಾಜ್ಯಶಾಸ್ತ್ರ ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ, ಜೂನ್ 28-ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್, ಸಂಸ್ಕೃತ), ಜೂನ್ 29-ದ್ವಿತೀಯ ಭಾಷೆ(ಇಂಗ್ಲಿಷ್-ಕನ್ನಡ), ಜೂನ್ 30-ಸಮಾಜವಿಜ್ಞಾನ ಪರೀಕ್ಷೆ ನಡೆಯಲಿದೆ.

ಜುಲೈ 1- ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಎನ್ ಎಸ್, ಕ್ಯೂ, ಎಫ್ ಪರೀಕ್ಷಾ ವಿಷಯಗಳು (ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟ್ ಅಂಡ್ ವೆಲ್ ನೆಸ್)

ಜುಲೈ -2ಎಲಿಮೆಂಟ್‌ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
ಎಸ್ ಎಸ್ ಎಲ್ ಸಿ ಪೂರಕ ಕೋವಿಡ್ ನಿಯಂತ್ರಣ ಕ್ರಮಗಳು, ಪ್ರತಿ ಪರೀಕ್ಷಾ ಕೇಂದ್ರವನ್ನು ಪರೀಕ್ಷೆಗೆ ಮುನ್ನಾ, ನಂತ್ರ ಸ್ಯಾನಿಟೈಸ್ ಮಾಡುವುದು. ಪರೀಕ್ಷಾ ಕೊಠಡಿಯ ಎಲ್ಲಾ ಪೀಠೋಪಕರಣ ಸ್ಯಾನಿಟೈಸ್ ಮಾಡುವುದು. ದೈಹಿಕ ಅಂತರ ಕಾಪಾಡುವುದು. ಪ್ರತಿ ಕೊಠಡಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳಿರಬೇಕು. ಒಂದು ಡೆಸ್ಕ್ ಗೆ ಇಬ್ಬರು ವಿದ್ಯಾರ್ಥಿಯಂತೆ ಆಸನದ ವ್ಯವಸ್ಥೆ ಮಾಡಲಾಗಿದೆ.

ಸೂಚನಾ ಫಲಕದ ಮುಂದೆ ವಿದ್ಯಾರ್ಥಿಗಳು ಗುಂಪು ಗೂಡದಂತೆ ತಡೆಯುವುದು.
ವಿದ್ಯಾರ್ಥಿ ತನ್ನದೇ ಆದಂತ ನೀರಿನ ಬಾಟಲಿ ತರುವುದು.
ಕೆಮ್ಮು, ನೆಗಡಿ, ಜ್ವರ ಮೊದಲಾದವುಗಳಿಂದ ಬಳಲುತ್ತಿರೋ, ಲಕ್ಷಣಗಳಿರೋ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಕನಿಷ್ಠ ಎರಡು ಕೊಠಡಿಗಳನ್ನು ವಿಶೇಷ ಕೊಠಡಿಗಳೆಂದು ಕಾಯ್ದಿರಿಸುವುದು.
ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳುವುದು.
ಪರೀಕ್ಷಾ ಕೇಂದ್ರ ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಹ್ಯಾಂಡ್ ಸ್ಯಾನಿಟೈಸ್ ಮಾಡುವುದು.
ಪರೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳುವ ಎಲ್ಲರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು.

RELATED ARTICLES
- Advertisment -
Google search engine

Most Popular

Recent Comments