Saturday, September 6, 2025
HomeUncategorizedರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಕರಣ ಹೆಚ್ಚಳ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಕರಣ ಹೆಚ್ಚಳ

ಬೆಂಗಳೂರು : ಭಾರತದಲ್ಲಿ 16,935 ಮಂದಿಕೊರೊನಾ ಸೋಂಕಿತರು ಪತ್ತೆಯಾಗಿದ್ದು , 51 ಮಂದಿ ಸಾವನ್ನಪ್ಪಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೊನಾ ನಾಲ್ಕನೇ ಅಲೆಯ ಭೀತಿ ಎದುರಾಗಿದೆ.

ಇನ್ನು, ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​​​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್​​​​​​ ಡೋಸ್​​​ಗಳನ್ನು ಪಡೆದಿದ್ದಾರೆ. ಸಕ್ರಿಯ ಪ್ರಕರಣಗಳು 14 ಸಾವಿರ ಇದೆ. ಕೋವಿಡ್​​​​ನಿಂದ ಸಾವನ್ನಪ್ಪಿರುವವರ ಸಂಖ್ಯೆ 5ಲಕ್ಷಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 16,069ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ ಏರಿಕೆ ಕಂಡಿದೆ.

ಅದಲ್ಲದೇ, ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್, ಕೋವಿಶೀಲ್ಡ್ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟಮಾಡುತ್ತಿರುವ ಕೊರೊನಾ ವಾರಿಯರ್ಸ್​​​​​ಗೆ ಮೊದಲು ಲಸಿಕೆಯನ್ನು ನೀಡಲಾಗಿತ್ತು . ಬಳಿಕ 45 ವರ್ಷಮೇಲ್ಪಟ್ಟ ಎಲ್ಲಾ ನಾಗರಿ ಕರಿಗೆ ಲಸಿಕೆ ನೀಡಲಾಗಿತ್ತು . ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

RELATED ARTICLES
- Advertisment -
Google search engine

Most Popular

Recent Comments