Sunday, September 14, 2025
HomeUncategorizedಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್​​ನಲ್ಲಿ ಕೆ.ಎಸ್.ಈಶ್ವರಪ್ಪಗೆ ಕ್ಲೀನ್ ಚಿಟ್

ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್​​ನಲ್ಲಿ ಕೆ.ಎಸ್.ಈಶ್ವರಪ್ಪಗೆ ಕ್ಲೀನ್ ಚಿಟ್

ಬೆಂಗಳೂರು : ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿರುವ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿ, ಪೊಲೀಸರು ಸಲ್ಲಿಸಿರುವ ‘ಬಿ ರಿಪೋರ್ಟ್‌’ ನ್ಯಾಯ ಸಿಗಬಹುದೆಂಬ ಭರವಸೆಯಿಂದ ಕಾಯುತ್ತಿದ್ದ ಮೃತನ ಕುಟುಂಬದ ನೋವನ್ನು ಇನ್ನಷ್ಟು ಹೆಚ್ಚಿಸಿದೆ. ಇದೇ ಕಾರಣಕ್ಕಾಗಿ ನಾನು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದು ಎಂದು ಹೇಳಿದ್ದಾರೆ.

ತನಿಖೆಗೆ ಮೊದಲೇ ಮುಖ್ಯಮಂತ್ರಿಗಳಾದಿಯಾಗಿ ಸಚಿವರು, ಬಿಜೆಪಿ ಶಾಸಕರು, ಆರೋಪಿ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿದ್ದರು. ಇದನ್ನೇ ಪೊಲೀಸ್ ಇಲಾಖೆ ಸ್ವಲ್ಪ ತಡವಾಗಿ ‘ಬಿ ರಿಪೋರ್ಟ್’ ರೂಪದಲ್ಲಿ ನೀಡಿದೆ. ಇದರಲ್ಲಿ ಆಶ್ಚರ್ಯಪಡುವಂತದ್ದು ಏನಿಲ್ಲ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments