Saturday, September 13, 2025
HomeUncategorizedರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ವೀರೇಂದ್ರ ಹೆಗ್ಗಡೆ

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ವೀರೇಂದ್ರ ಹೆಗ್ಗಡೆ

ದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯ ಸದಸ್ಯರಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ದೇವರ ಹೆಸರಿನಲ್ಲಿ ಕನ್ನಡದಲ್ಲೇ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಡಿ. ವೀರೇಂದ್ರ ಹೆಗ್ಗಡೆ, ಸಂಗೀತ ನಿರ್ದೇಶಕ ಇಳಯರಾಜ, ಅಥ್ಲೀಟ್ ಪಿ. ಟಿ. ಉಷಾ ಮತ್ತು ಚಲನಚಿತ್ರ ಕಥೆ–ಸಂಭಾಷಣೆಗಾರ ವಿಜಯೇಂದ್ರ ಪ್ರಸಾದ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು.

ಸಂಸತ್‌ನ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದೆ. ಬುಧವಾರ ದೆಹಲಿಗೆ ತೆರಳಿರುವ ಹೆಗ್ಗಡೆ ಅವರು ಗುರುವಾರ ಕಲಾಪಕ್ಕೆ ಹಾಜರಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments