Saturday, September 13, 2025
HomeUncategorizedಲಾರಿಗೆ ಬೈಕ್ ಡಿಕ್ಕಿ; ಸ್ಥಳದಲ್ಲೇ ವ್ಯಕ್ತಿ ಸಾವು

ಲಾರಿಗೆ ಬೈಕ್ ಡಿಕ್ಕಿ; ಸ್ಥಳದಲ್ಲೇ ವ್ಯಕ್ತಿ ಸಾವು

ತುಮಕೂರು: ಬೈಕ್ ಸವಾರನಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತುಮಕೂರು ಟು ಕುಣಿಗಲ್ ರಸ್ತೆಯ ನಾಗವಲ್ಲಿ ಬಳಿ ಬುಧವಾರ ರಾತ್ರಿ ನಡೆದಿದೆ.

ಮಂಜುನಾಥ್ (25) ಮೃತ ದುರ್ದೈವಿ. ಇವರು ಹೆಬ್ಬೂರು ಹೋಬಳಿಯ ಗಂಗನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ನಾಗವಲ್ಲಿಯ ವೈನ್ಸ್ ಸ್ಟೋರ್​​ನಲ್ಲಿ ಅಸಿಸ್ಟೆಂಟ್ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದರು.

ಹೆಬ್ಬೂರು ಕಡೆಯಿಂದ ತುಮಕೂರು ಕಡೆಗೆ ಹೊರಟಿದ್ದ ಬೈಕ್ ಇದೇ ರಸ್ತೆಯಲ್ಲಿ ತೆರಳುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಘಟನೆ ಸಂಬಂಧ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮೃತದೇಹ‌ವನ್ನು ತುಮಕೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular

Recent Comments