Saturday, August 30, 2025
HomeUncategorizedದಲಿತರನ್ನು 'ಸಿಎಂ' ಮಾಡಲು ಬಿಜೆಪಿಯಿಂದ ಸಾಧ್ಯ: ಛಲವಾದಿ ನಾರಾಯಣಸ್ವಾಮಿ

ದಲಿತರನ್ನು ‘ಸಿಎಂ’ ಮಾಡಲು ಬಿಜೆಪಿಯಿಂದ ಸಾಧ್ಯ: ಛಲವಾದಿ ನಾರಾಯಣಸ್ವಾಮಿ

ವಿಜಯಪುರ: ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿ ಆಗಬೇಕು ಎಂದಾದರೆ ಅದು ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದು ವಿಧಾನ ಪರಿಷತ್‌ ಸದಸ್ಯ ಹಾಗೂ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ಈಗಾಗಲೇ ಹಿರಿಯ ದಲಿತ ನಾಯಕ ಗೋವಿಂದ ಕಾರಜೋಳ ಅವರನ್ನು ಸಚಿವ ಹಾಗೂ ಉಪ ಮುಖ್ಯಮಂತ್ರಿ ಮಾಡಲಾಗಿದೆ. ಮುಂದೆ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 36 ವಿಧಾನಸಭಾ ಕ್ಷೇತ್ರಗಳು ಎಸ್‌ಸಿ ಮತ್ತು ಎಸ್‌ಟಿಗೆ ಮೀಸಲಾಗಿವೆ. ಮೀಸಲು ಕ್ಷೇತ್ರಗಳನ್ನು ಹೊರತುಪಡಿಸಿಯೂ ದಲಿತರಿಗೆ ಸ್ಪರ್ಧಿಲು ಬಿಜೆಪಿ ಹೆಚ್ಚಿನ ಅವಕಾಶ ಕಲ್ಪಿಸಲಿದೆ. ಶೇ 70ಕ್ಕಿಂತ ಹೆಚ್ಚು ದಲಿತರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿದರು.

‘ಕಾಂಗ್ರೆಸ್‌ ಪಕ್ಷದಲ್ಲಿ ಇಲ್ಲದ ಸ್ಥಾನಕ್ಕೆ ಗುದ್ದಾಟ ನಡೆದಿದೆ. ಒಂದು ಡಜನ್‌ ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ಮುಗಿಬಿದ್ದಿದ್ದಾರೆ. ಆದರೆ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 60-65 ಸ್ಥಾನ ಗೆಲ್ಲುವುದು ಕಷ್ಟ. ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗುವ ಉದ್ದೇಶದಿಂದ ಜನ್ಮದಿನದ ನೆಪದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular

Recent Comments